ಕಾಂಗ್ರೆಸ್ ಪಕ್ಷಕ್ಕೆ ಜನಸಾಮಾನ್ಯರು ನೀಡಿದ ದೇಣಿಗೆಯನ್ನು ಬಿಜೆಪಿ ಲೂಟಿ ಮಾಡಿದೆ: ಕಾಂಗ್ರೆಸ್

Prasthutha|

ನವದೆಹಲಿ: ಕಾಂಗ್ರೆಸ್ ಪಕ್ಷಕ್ಕೆ ಜನಸಾಮಾನ್ಯರು ನೀಡಿದ ದೇಣಿಗೆಯನ್ನು ಬಿಜೆಪಿ ಲೂಟಿ ಮಾಡಿದ್ದು, ನಮ್ಮ ಖಾತೆಗಳನ್ನು ಫ್ರೀಜ್ ಮಾಡಿ ಬಲವಂತವಾಗಿ 115.32 ಕೋಟಿ ಹಿಂಪಡೆದಿದೆ. ಬಿಜೆಪಿ ಸೇರಿದಂತೆ ಯಾವುದೇ ರಾಜಕೀಯ ಪಕ್ಷಗಳು ಆದಾಯ ತೆರಿಗೆ ಪಾವತಿಸುವುದಿಲ್ಲ, ಆದರೆ ಕಾಂಗ್ರೆಸ್ ಪಕ್ಷದ 11 ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ. ಏಕೆ ಎಂದು ಕಾಂಗ್ರೆಸ್ ಗುರುವಾರ ವಾಗ್ದಾಳಿ ನಡೆಸಿದೆ.

- Advertisement -


ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಪತ್ರಿಕಾಗೋಷ್ಠಿ ನಡೆಸಿತು.


ಈಗ ಕಾಂಗ್ರೆಸ್ ಚುನಾವಣಾ ಬಿಕ್ಕಟ್ಟು ಎದುರಿಸುತ್ತಿದೆ. ಪ್ರಚಾರಕ್ಕಾಗಿ ನಮ್ಮ ಬಳಿ ಹಣವಿಲ್ಲ. ಸೀತಾರಾಮ್ ಕೇಸರಿ ಅವರ ಕಾಲದ ನಿಧಿಗೆ ಸಂಬಂಧಿಸಿದಂತೆ ನಮಗೆ ನೋಟಿಸ್ ನೀಡಲಾಗುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

- Advertisement -


ಐಟಿಯಂತಹ ಸಾಂವಿಧಾನಿಕ ಹಾಗೂ ನ್ಯಾಯಾಂಗ ಸಂಸ್ಥೆಗಳ ಮೇಲೆ ಆಡಳಿತ ಪಕ್ಷವು ನೇರ ಅಥವಾ ಪರೋಕ್ಷ ನಿಯಂತ್ರಣವನ್ನು ಹೊಂದಿರಬಾರದು ಎಂದಿದ್ದಾರೆ.


ಸಾಂವಿಧಾನಿಕ ಸಂಸ್ಥೆಗಳು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ಬಯಸಿದರೆ, ನಮ್ಮ ಬ್ಯಾಂಕ್ ಖಾತೆಗಳನ್ನು ಮುಕ್ತವಾಗಿ ಪ್ರವೇಶಿಸಲು ಅವಕಾಶ ನೀಡಬೇಕು ಎಂದು ಖರ್ಗೆ ಹೇಳಿದರು. ಯಾವುದೇ ರಾಜಕೀಯ ಪಕ್ಷಗಳು ಆದಾಯ ತೆರಿಗೆ ವ್ಯಾಪ್ತಿಗೆ ಬರುವುದಿಲ್ಲ ಎಂದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅನ್ನು ಆರ್ಥಿಕವಾಗಿ ದುರ್ಬಲಗೊಳಿಸಲು ಪ್ರಧಾನಿಯವರಿಂದ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.



Join Whatsapp