Home ಟಾಪ್ ಸುದ್ದಿಗಳು ಹೊಂದಾಣಿಕೆ ರಾಜಕಾರಣದಿಂದಲೇ ಬಿಜೆಪಿ ಸೋತಿದೆ: ಸ್ವಪಕ್ಷೀಯ ನಾಯಕರ ವಿರುದ್ಧವೇ ಸಿಟಿ ರವಿ ಆಕ್ರೋಶ

ಹೊಂದಾಣಿಕೆ ರಾಜಕಾರಣದಿಂದಲೇ ಬಿಜೆಪಿ ಸೋತಿದೆ: ಸ್ವಪಕ್ಷೀಯ ನಾಯಕರ ವಿರುದ್ಧವೇ ಸಿಟಿ ರವಿ ಆಕ್ರೋಶ

ನವದೆಹಲಿ: ಹೊಂದಾಣಿಕೆ ರಾಜಕಾರಣದಿಂದಲೇ ಬಿಜೆಪಿ ಸೋತಿದೆ ಎಂದು ಸ್ವ ಪಕ್ಷದ ನಾಯಕರ ವಿರುದ್ಧವೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿಗೆ ಕಾರಣವೇನು ಎಂಬ ಕುರಿತು ಪಕ್ಷದ ನಾಯಕರು ಪರಾಮರ್ಶೆ ಸಭೆ ನಡೆಸಿದ್ದಾರೆ. ಇವೆಲ್ಲದರ ಮಧ್ಯೆ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಸಿಟಿ ರವಿ, ನಮ್ಮಲ್ಲೂ ರಾಜಿ ರಾಜಕಾರಣ ಮಾಡಿ ತಪ್ಪು ಮಾಡಿದ್ದಾರೆ. ಕೆಲವರ ರಾಜಿ ರಾಜಕಾರಣದಿಂದ ಬಿಜೆಪಿ ಪಕ್ಷ ಅಧಿಕಾರ ಕಳೆದುಕೊಂಡಿತು. ಹೊಂದಾಣಿಕೆ ರಾಜಕಾರಣದಿಂದಲೇ ಬಿಜೆಪಿ ಸೋತಿದೆ ಎಂದು ಹೇಳಿದ್ದಾರೆ. ಹೊಂದಾಣಿಕೆ ರಾಜಕಾರಣ ಮಾಡಿಕೊಳ್ಳದಿದ್ದರೆ ಇವತ್ತು ಅಧಿಕಾರ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಸ್ವ ಪಕ್ಷದ ನಾಯಕರ ವಿರುದ್ಧವೇ ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Join Whatsapp
Exit mobile version