ನವದೆಹಲಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಹಲವು ಭರವಸೆಗಳನ್ನು ನೀಡಿದೆ.
ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, 70 ವರ್ಷ ಮೇಲ್ಪಟ್ಟವರಿಗೂ ಕೂಡ ಆಯುಷ್ಮಾನ್ ಭಾರತ್ ಯೋಜನೆಯಡಿ 5 ಲಕ್ಷದವರೆಗೆ ಉಚಿತ ಚಿಕಿತ್ಸೆ ದೊರೆಯಲಿದೆ ಎಂದು ತಿಳಿಸಿದರು.
ಭವಿಷ್ಯದಲ್ಲಿ 10 ಕೋಟಿ ರೈತರು ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಪ್ರಯೋಜನ್ಗಳನ್ನು ಪಡೆಯಲಿದ್ದಾರೆ. ಸಹಕಾರದೊಂದಿಗೆ ಸಮೃದ್ಧಿ ಎಂಬ ಪರಿಕಲ್ಪನೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಹಕಾರ ನೀತಿಯನ್ನು ಪರಿಚಯಿಸಲಿದೆ. ದೇಶಾದ್ಯಂತ ಹೈನುಗಾರಿಕೆ ಹಾಗೂ ಸಹಕಾರ ಸಂಘಗಳನ್ನು ಹೆಚ್ಚಿಸಲಾಗುವುದು.
ಬಡವರಿಗಾಗಿ ಇನ್ನೂ 3 ಕೋಟಿ ಮನೆಗಳ ನಿರ್ಮಾಣ ಮಾಡಲಾಗುವುದು. ಪ್ರತಿ ಮನೆಗೂ ಅಗ್ಗದ ಪೈಪ್ಡ್ ಅಡುಗೆ ಅನಿಲ ತಲುಪಿಸಲಾಗುವುದು.
ಮುದ್ರಾ ಯೀಜನೆಯಡಿ ಸಿಗುವ ಸಾಲದ ಪ್ರಮಾಣ ಹೆಚ್ಚಿದ್ಸಲಾಗುವುದು. ಮುದ್ರಾ ಯೋಜನೆಯ ಮೊದಲ ಸಾಲ 10 ಲಕ್ಷ ರೂ ಮಿತಿಯನ್ನು 20 ಲಕ್ಷಕ್ಕೆ ಹೆಚ್ಚಿಸಲಾಗುವುದು.
ವಂದೇ ಭಾರತ್ ರೈಲುಗಳನ್ನು ದೇಶದ ಮೂಲೆ ಮೂಲೆಗೆ ವಿಸ್ತರಣೆ. ವಂದೇ ಭಾರತ್ ನ ಮೂರು ಮಾದರಿಯ ವಂದೇ ಭಾರತ್ ಸ್ಲೀಪರ್, ವಂದೇ ಭಾರತ್ ಚೇರ್ ಕಾರ್ ಹಾಗೂ ವಂದೇ ಭಾರತ್ ಮೆಟ್ರೋ ರೈಲುಗಳನ್ನು ಜಾರಿಗೆ ತರಲಾಗುವುದು.
ಅಹಮದಾಬಾದ್-ಮುಂಬೈ ಬುಲೆಟ್ ಟ್ರೈನ್ ಬಹುತೇಕ ಮುಕ್ತಾಯ ಹಂತದಲ್ಲಿದೆ. ಇದೇ ರೀತಿ ಉತ್ತರ ಭಾರತದಲ್ಲಿ ಒಂದು ಬುಲೆಟ್ ರೈಲು, ದಕ್ಷಿಣ ಭಾರತದಲ್ಲಿ ಒಂದು ಬುಲೆಟ್ ರೈಲು, ಪೂರ್ವ ಭಾರತದಲ್ಲಿ ಒಂದು ಬುಲೆಟ್ ರೈಲು ಸಂಚರಿಸಲಿದ್ದು, ಇದ್ದಕ್ಕಾಗಿ ಶೀಘ್ರದಲ್ಲಿ ಸಿದ್ಧತೆ ಆರಂಭವಾಗಲಿದೆ ಎಂದು ಹೇಳಿದರು.
ಏಕರೂಪ ನಾಗರಿಕ ಸಂಹಿತೆ ಮತ್ತು ಒಂದು ರಾಷ್ಟ್ರ ಒಂದು ಚುನಾವಣೆಯನ್ನು ಜಾರಿಗೊಳಿಸಲಾಗುವುದು ಎಂದು ಬಿಜೆಪಿ ಪ್ರಣಾಳಿಕೆ ಹೇಳಿದೆ.