ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ತೂರಿರುವುದರ ಹಿಂದೆ ಬಿಜೆಪಿಯದೇ ಕೈವಾಡ ಇರಬಹುದು: ಸಿದ್ದರಾಮಯ್ಯ

Prasthutha|

ಬೆಂಗಳೂರು: ಮಾಡಾಳ್ ವಿರೂಪಾಕ್ಷಪ್ಪ ಬಂಧನ ಮೊದಲ ದಿನವೇ ಆಗಬೇಕಿತ್ತು, ತಡವಾಗಿ ಆಗಿದೆ. ಕಾನೂನು ರೀತಿಯ ನಿರ್ಣಯದಂತೆ ಆಗಿದೆ. ರೆಡ್ ಹ್ಯಾಂಡ್ ಆಗಿ ಅವರ ಮಗ ಸಿಕ್ಕಿಬಿದ್ದಿರುವುದರಿಂದ ಈ ಪ್ರಕರಣದಲ್ಲಿ ವಿರೂಪಾಕ್ಷಪ್ಪ ಬಂಧನ ಸರಿಯಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ತೂರಿರುವುದರ ಹಿಂದೆ ಬಿಜೆಪಿಯದೇ ಕೈವಾಡ ಇರಬಹುದು. ಈ ಬಗ್ಗೆ ಯಡಿಯೂರಪ್ಪ ಅವರು ಬಂಜಾರ ಸಮುದಾಯದ ಜನ ತಪ್ಪು ಗ್ರಹಿಕೆಯಿಂದ ಕಲ್ಲು ತೂರಾಟ ಮಾಡಿದ್ದಾರೆ ಎಂದಿದ್ದಾರೆ, ಆದರೆ ಒಳಮೀಸಲಾತಿಯನ್ನು ಬಂಜಾರ ಸಮುದಾಯ ಮೊದಲಿಂದಲೂ ವಿರೋಧ ಮಾಡಿಕೊಂಡು ಬಂದಿದೆ, ಈ ಉದ್ದೇಶಕ್ಕೆ ಈಗ ವಿರೋಧ ಮಾಡಿರಬಹುದು ಎಂದರು.


2018ರ ಚುನಾವಣೆಯಲ್ಲಿ ಬಿಜೆಪಿ – ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿತ್ತು ಎಂದು ಸಿ.ಪಿ ಯೋಗೀಶ್ವರ್ ಸತ್ಯ ಹೇಳಿದ್ದಾರೆ. ಅವರಿಗೆ ಧನ್ಯವಾದ ಎಂದರು.

Join Whatsapp