ಬಿಜೆಪಿ ಎಂದರೆ ಭ್ರಷ್ಟ ಜನತಾ ಪಕ್ಷ, ಬ್ರೋಕರ್ ಜನತಾ ಪಕ್ಷ: ಪ್ರಿಯಾಂಕ್ ಖರ್ಗೆ

Prasthutha|

ಬೆಂಗಳೂರು: ಬಿಜೆಪಿ ಭಾರತೀಯ ಜನತಾ ಪಕ್ಷದಿಂದ ಭ್ರಷ್ಟ ಜನತಾ ಪಕ್ಷವಾಗಿತ್ತು. ಈಗ ಬ್ರೋಕರ್ ಜನತಾ ಪಕ್ಷವಾಗಿದೆ ಎಂದು ಕೆಪಿಸಿಸಿ ಸಂವಹನ ವಿಭಾಗ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

- Advertisement -

ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಎಸ್ ಐ ಹುದ್ದೆ ನೀಡುವುದಾಗಿ ಹಣ ಪಡೆದ ಶಾಸಕರು ಹಣ ವಾಪಸ್ ಮಾಡದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರ ಆಡಿಯೋ ಬಹಿರಂಗವಾಗಿದೆ. ಬಿಜೆಪಿ ಶಾಸಕರು, ಸಚಿವರಿಗೆ ಬ್ರೋಕರ್ ಗಳಾಗಿದ್ದಾರೆ ಎಂದು ಟೀಕಿಸಿದರು.

ಇಷ್ಟೆಲ್ಲಾ ಆದರೂ ಶಾಸಕರಿಗೆ ನೋಟೀಸ್ ಹೋಗಿಲ್ಲ. ಸುಮೋಟೋ ಪ್ರಕರಣ ದಾಖಲಾಗಿಲ್ಲ. ಮುಖ್ಯಮಂತ್ರಿಗಳು ಶಾಸಕರನ್ನು ಕರೆದು ಪ್ರಶ್ನಿಸಿಲ್ಲ. ಆಗ ಬೊಮ್ಮಾಯಿ ಅವರೇ ಗೃಹಮಂತ್ರಿಯಾಗಿದ್ದರು. ನಾವು ಯಾವಾಗಲೂ ಹೇಳುವಂತೆ ವಿಧಾನಸೌಧ ವ್ಯಾಪಾರಸೌಧವಾಗಿದೆ. ಶಾಸಕರ ಭವನದಲ್ಲಿ ಡೀಲ್ ಮಾಡಿರುವ ಇವರಿಗೆ ನಾಚಿಕೆ ಇಲ್ಲವೇ? ಕೆಲಸ ಆಗದ ನಂತರ ಹಣ ಕೇಳಿದಾಗ ನಾನು ಹಣವನ್ನು ಸರ್ಕಾರಕ್ಕೆ ಕೊಟ್ಟಿರುವುದಾಗಿ ಹೇಳುತ್ತಾರೆ. ಈ ಸರ್ಕಾರ ಎಂದರೆ ವಿಧಾನಸೌಧ ಅಲ್ಲವೇ  ಎಂದು ಖರ್ಗೆ ಪ್ರಶ್ನಿಸಿದರು.

- Advertisement -

ಬೊಮ್ಮಾಯಿ ಅವರು ದೊಡ್ಡಬಳ್ಳಾಪುರದಲ್ಲಿ ಧೈರ್ಯ, ತಾಕತ್ತು, ಧಮ್ಮಿನ ವಿಚಾರವಾಗಿ ಮಾತನಾಡಿದರು. ನಿಮಗೆ ಧಮ್ಮಿದ್ದರೆ ಶಾಸಕರನ್ನು ಕರೆಸಿ, ಪರೀಕ್ಷೆ ಬರೆದ ಯುವಕರು, ನಿರುದ್ಯೋಗಿ ಯುವಕರ ಮುಂದೆ ಈ ವಿಚಾರ ಪ್ರಸ್ತಾಪಿಸಿ. ಶಾಸಕರು ಯಾಕೆ 15 ಲಕ್ಷ ಪಡೆದರು? ಸರ್ಕಾರಿ ಹುದ್ದೆಗಳನ್ನು ಯಾಕೆ ಮಾರಾಟ ಮಾಡಿದ್ದಾರೆ ಎಂದು ಯುವಕರ ಮುಂದೆ ಹೇಳಿ. ನಿಮ್ಮ ಯೋಗ್ಯತೆಗೆ ಒಬ್ಬರಿಗೆ ಕೆಲಸ ನೀಡಲು ಆಗಿಲ್ಲ, ನೀವು ಧಮ್ಮು ತಾಕತ್ತು ಬಗ್ಗೆ ಮಾತನಾಡುತ್ತೀರಾ  ಎಂದು ಸವಾಲು ಹಾಕಿದರು.

Join Whatsapp