Home ಟಾಪ್ ಸುದ್ದಿಗಳು ಮಸೂದೆಗಳ ಪ್ರತಿಗಳನ್ನು ಹರಿದು ಸ್ಪೀಕರ್ ಪೀಠಕ್ಕೆ ಎಸೆದ ಬಿಜೆಪಿ ಸದಸ್ಯರು!

ಮಸೂದೆಗಳ ಪ್ರತಿಗಳನ್ನು ಹರಿದು ಸ್ಪೀಕರ್ ಪೀಠಕ್ಕೆ ಎಸೆದ ಬಿಜೆಪಿ ಸದಸ್ಯರು!

ಬೆಂಗಳೂರು: ಮಹಾಘಟಬಂಧನ್ ಸಭೆಗಾಗಿ ಹೊರ ರಾಜ್ಯಗಳಿಂದ ಬಂದ ನಾಯಕರನ್ನು ಸ್ವಾಗತಿಸಲು ಐಎಎಸ್ ಅಧಿಕಾರಿಗಳನ್ನು ಸರ್ಕಾರ ನಿಯೋಜಿಸಿದ್ದ ವಿಚಾರ ಸದನದಲ್ಲಿ ಕೋಲಾಹಲ ಸೃಷ್ಟಿಸಿತು. ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟಿಸಿದರು. ಅಲ್ಲದೇ ವಿಧೇಯಕದ ಪ್ರತಿಗಳನ್ನು ಪೀಠದಲ್ಲಿದ್ದ ಉಪ ಸಭಾಧ್ಯಕ್ಷರ ಮೇಲೆ ಎಸೆದರು.


ಮಸೂದೆಗಳ ಪ್ರತಿಗಳನ್ನು ಹರಿದು ಪೀಠದಲ್ಲಿದ್ದ ಉಪ ಸಭಾಧ್ಯಕ್ಷರ ಮೇಲೆಸೆದಿದ್ದರಿಂದ ಕೋಲಾಹಲ ಸೃಷ್ಟಿಯಾಯಿತು.


ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ಮಧ್ಯೆ ಘರ್ಷಣೆಯ ವಾತಾವರಣ ಸೃಷ್ಟಿಯಾಗಿದ್ದು, ಕಲಾಪವನ್ನು ಮತ್ತೆ ಮುಂದೂಡಲಾಗಿದೆ. ಮಹಾಘಟಬಂಧನ್ ಗಣ್ಯರ ಸ್ವಾಗತಕ್ಕೆ ಐಎಎಸ್ ಅಧಿಕಾರಿಗಳ ಬಳಕೆ ವಿಚಾರವನ್ನು ಕಲಾಪದಲ್ಲಿ ಪ್ರಸ್ತಾಪಿಸಿದ ಆರ್. ಅಶೋಕ್, ನಿನ್ನೆ, ಮೊನ್ನೆ ಸಭೆಗಳಲ್ಲಿ ಗಣ್ಯರ ಸ್ವಾಗತಕ್ಕೆ ಹೊಟೇಲ್ ಗೆ ಕರೆತರಲು ಹಿರಿಯ ಅಧಿಕಾರಿಗಳ ಬಳಕೆ ಮಾಡಲಾಗಿದೆ. ಇದು ಯಾವ ಕಾನೂನಿನಲ್ಲಿ ಬಳಸಿದ್ದೀರಿ? ಇದು ಅಪರಾಧ, ಶಿಷ್ಟಾಚಾರ ಉಲ್ಲಂಘನೆ. ಸರ್ಕಾರ ಇದರ ಬಗ್ಗೆ ಸ್ಪಷ್ಟೀಕರಣ ಕೊಡಬೇಕು ಎಂದು ಆಗ್ರಹಿಸಿದರು. ಅಶೋಕ್ ವಿರೋಧಕ್ಕೆ ಸಚಿವ ಎಚ್.ಕೆ. ಪಾಟೀಲ್ ಸಮಜಾಯಿಷಿ ನೀಡಿ, ರಾಜ್ಯಕ್ಕೆ ಗಣ್ಯರು ಬಂದಾಗ ಪ್ರೋಟೋಕಾಲ್ ಪ್ರಕಾರ ಅಧಿಕಾರಿಗಳ ನಿಯೋಜನೆ ಮಾಡಲಾಗಿದೆ.

ನಮ್ಮಿಂದ ಪ್ರೋಟೋಕಾಲ್ ಉಲ್ಲಂಘನೆ ಆಗಿಲ್ಲ. ಪ್ರೋಟೋಕಾಲ್ ಇಲ್ಲದವರಿಗೆ ನಮ್ಮ ನಾಯಕರು ಸ್ವಾಗತಿಸಿದ್ದಾರೆ. 26 ಪಕ್ಷಗಳು ಒಟ್ಟಾಗಿ ಸೇರಿದ್ದು ಬಿಜೆಪಿಯವರಿಗೆ ಸಹಿಸೋದಕ್ಕೆ ಆಗ್ತಿಲ್ಲ ಎಂದು ಹೇಳಿದರು. ಪಾಟೀಲ್ ರ ಹೇಳಿಕೆಗೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಇದು ಸದನದಲ್ಲಿ ಗದ್ದಲಕ್ಕೆ ಕಾರಣವಾಯಿತು.

Join Whatsapp
Exit mobile version