ಯೋಗಿ ಕೈಬಿಟ್ಟು ಅಖಿಲೇಶ್ ಕೈ ಹಿಡಿದ ಬಿಜೆಪಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ

Prasthutha|

ಲಕ್ನೋ: ಉತ್ತರ ಪ್ರದೇಶದ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಸ್ವಾಮಿ ಪ್ರಸಾದ್ ಮೌರ್ಯ, ಬಿಜೆಪಿ ಮತ್ತು ಸಚಿವ ಹುದ್ದೆಗೆ ರಾಜೀನಾಮೆ ಸಲ್ಲಿಸಿದರಲ್ಲದೆ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸಮ್ಮುಖದಲ್ಲಿ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿ ಅಚ್ಚರಿ ಮೂಡಿಸಿದ್ದಾರೆ.

- Advertisement -

“ದಲಿತರು, ಹಿಂದುಳಿದವರು, ರೈತರು, ನಿರುದ್ಯೋಗಿ ಯುವಕರು , ಸಣ್ಣ ಮತ್ತು ಮಧ್ಯಮ ಉದ್ಯಮಿಗಳ ಬಗ್ಗೆ ತೀವ್ರ ನಿರ್ಲಕ್ಷ್ಯ ಧೋರಣೆಯಿಂದಾಗಿ ನಾನು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸಂಪುಟಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ಪಕ್ಷದ ಹಿರಿಯ ನಾಯಕ ಮೌರ್ಯ ತಮ್ಮ ರಾಜೀನಾಮೆ ಪತ್ರದೊಂದಿಗೆ ಟ್ವೀಟ್ ಮಾಡಿದ್ದಾರೆ.

ಯೋಗಿ ಸಂಪುಟದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಮತ್ತು ಸಮಾನತೆಗಾಗಿ ಹೋರಾಡುತ್ತಿದ್ದ ಏಕೈಕ ಸಚಿವ ಎಂಬ ಹೆಗ್ಗಳಿಕೆಗೆ ಮೌರ್ಯ ಪಾತ್ರರಾಗಿದ್ದರು. ಈ ನಿಟ್ಟಿನಲ್ಲಿ ಅವರನ್ನು ಸಮಾಜವಾದಿ ಪಕ್ಷಕ್ಕೆ ಸೇರಿಸಿರುವುದು ಉತ್ತರ ಪ್ರದೇಶ ಚುನಾವಣೆಯಲ್ಲಿ ಭಾರೀ ಮಹತ್ವ ಪಡೆದಿದೆ ಎಂದೇ ವಿಶ್ಲೇಷಿಸಲಾಗಿದೆ.

- Advertisement -

ಫೆಬ್ರವರಿ 10 ರಿಂದ ಮಾರ್ಚ್ 7 ರ ವರೆಗೆ ಏಳು ಹಂತದಲ್ಲಿ ಉತ್ತರ ಪ್ರದೇಶದ ವಿಧಾನ ಸಭೆಗೆ ಚುನಾವಣೆ ನಡೆಯಲಿದೆ ಎಂದು ಹೇಳಲಾಗಿದೆ.

Join Whatsapp