Home ಟಾಪ್ ಸುದ್ದಿಗಳು ಚುನಾವಣಾ ಆಯೋಗವನ್ನೂ ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ: ಅತಿಶಿ

ಚುನಾವಣಾ ಆಯೋಗವನ್ನೂ ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ: ಅತಿಶಿ

ನವದೆಹಲಿ: ಪ್ರಸಕ್ತ ಚುನಾವಣೆಯಲ್ಲಿ ಎಎಪಿಯನ್ನು ಎದುರಿಸಲು ತನಿಖಾ ಸಂಸ್ಥೆಗಳನ್ನು ಮುಂದಿಟ್ಟುಕೊಂಡು ಆಟವಾಡುವುದನ್ನು ಬಿಜೆಪಿ ಕೈಬಿಡಬೇಕು ಎಂದು ಎಎಪಿ ನಾಯಕಿ ಅತಿಶಿ ಎಚ್ಚರಿಕೆ ನೀಡಿದ್ದಾರೆ.


ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ‘ಚುನಾವಣಾ ಆಯೋಗ ಸಹ ಭಾರತೀಯ ಜನತಾ ಪಾರ್ಟಿಯ ಇಚ್ಛೆಯಂತೆಯೇ ಕಾರ್ಯ ನಿರ್ವಹಿಸುತ್ತಿದೆ. ಸಿಬಿಐ, ಐಟಿ ಹಾಗೂ ಜಾರಿ ನಿರ್ದೇಶನಾಲಯ ಹಾಗೂ ಇತರ ತನಿಖಾ ಸಂಸ್ಥೆಗಳಂತೆಯೇ ಚುನಾವಣಾ ಆಯೋಗವನ್ನೂ ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ. ತನಿಖಾ ಸಂಸ್ಥೆಗಳಂತೆಯೇ ಈಗ ಚುನಾವಣಾ ಆಯೋಗವೂ ಎಎಪಿ ನಾಯಕರನ್ನು ಗುರಿಯಾಗಿಸಿಕೊಂಡು ನೋಟಿಸ್ ನೀಡುತ್ತಿದೆ’ ಎಂದು ಅತಿಶಿ ಆರೋಪಿಸಿದ್ದಾರೆ.

Join Whatsapp
Exit mobile version