ರೈತರ ಕುರಿತು ರಾಜ್ಯ ಸರಕಾರದ ಧೋರಣೆ ಖಂಡಿಸಿ ವಿಧಾನಸಭೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಬಿಜೆಪಿ ಶಾಸಕ !

Prasthutha: March 13, 2021

ಪಡಿತರ ಮತ್ತು ಇತರ ವ್ಯವಸ್ಥೆಯ ಕುರಿತ ಚರ್ಚೆಯ ಸಂದರ್ಭ ಒಡಿಶಾದ ಬಿಜೆಪಿ ಶಾಸಕ ವಿಧಾನಸಭೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ದಿಯೋಘಡ ಶಾಸಕರಾದ ಸುಭಾಷ್ ಚಂದ್ರ ಪಾಣಿಗ್ರಹಿ ತಮ್ಮ ಕ್ಷೇತ್ರದ ರೈತರ ಉತ್ಪನ್ನಗಳನ್ನು ದಾಸ್ತಾನು ಮಾಡಲು ರಾಜ್ಯ ಸರ್ಕಾರ ಸಿದ್ಧರಿಲ್ಲದಿರುವುದನ್ನು ವಿರೋಧಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

 ಬಜೆಟ್ ಅಧಿವೇಶನದ ಎರಡನೇ ಹಂತವು ಸದನದಲ್ಲಿ ನಡೆಯುತ್ತಿದ್ದಂತೆಯೇ ಈ  ಘಟನೆ ನಡೆದಿದೆ. ಸ್ಯಾನಿಟೈಝರ್ ಅನ್ನು ತನ್ನ ಬಾಯಿಗೆ ಸುರಿಯಲು ಪ್ರಯತ್ನಿಸಿದ ಶಾಸಕರನ್ನು ಸಂಸದೀಯ ವ್ಯವಹಾರಗಳ ಸಚಿವ ಬಿಕ್ರಮ್ ಅರೂಕಾ ಮತ್ತು ಬಿಜೆಡಿ ಶಾಸಕ ಪ್ರಮೀಲಾ ಮಲ್ಲಿಕ್ ತಡೆದಿದ್ದಾರೆ.  ವಿಧಾನಸಭೆಯಲ್ಲಿ ರೈತರ ಸಮಸ್ಯೆಗಳನ್ನು ಎತ್ತುವುದು ನಿಜ ಆದರೆ ಇಂತಹ ಕ್ರಮಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಬಿಜೆಡಿ ಶಾಸಕ ಅನಂತ ದಾಸ್ ಹೇಳಿದ್ದಾರೆ. ದಾಸ್ತಾನು ಪ್ರಕ್ರಿಯೆಯನ್ನು ಸುಗಮಗೊಳಿಸಬೇಕೆಂದು ಒತ್ತಾಯಿಸಿ ಪಾಣಿಗ್ರಹಿ ಈ ಹಿಂದೆ ಎರಡು ಬಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!