ಕಾಂಗ್ರೆಸ್ ಪಾಕಿಸ್ತಾನದ ಪಕ್ಷ ಎಂದ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್

Prasthutha|

ಕಲಬುರಗಿ: ಕಾಂಗ್ರೆಸ್ ಪಕ್ಷ ಮುಸ್ಲಿಮರ ಮತ್ತು ಅಲ್ಪಸಂಖ್ಯಾತರ ಪರ ನಿಲುವುಗಳನ್ನು ತೆಗೆದುಕೊಳ್ಳುತ್ತಿದೆ. ಹಿಂದೂಗಳಿಗೆ ಸಮಸ್ಯೆಯಾದಾಗ ಯಾವತ್ತೂ ಧ್ವನಿ ಎತ್ತುವುದಿಲ್ಲ. ಹೀಗಾಗಿ ಅದು ಪಾಕಿಸ್ತಾನದ ಪಕ್ಷವಾಗಿವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ.

- Advertisement -

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಎಂದಿಗೂ ಹಿಂದೂಗಳ ಹಿತ ಕಾಯುವ ಕೆಲಸ ಮಾಡಿಲ್ಲ. ಇದೀಗ ಅವರಿಗೆ ಅಭದ್ರತೆ ಶುರುವಾಗಿದ್ದರಿಂದಲೇ ಎಲ್ಲರೂ ಬೀದಿಗೆ ಬಂದಿದ್ದಾರೆ ಎಂದರು.

ಇನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷದಲ್ಲಿ ಮೂಲೆಗುಂಪು ಮಾಡಿಲ್ಲ. ಅವರನ್ನು ಪಕ್ಷದ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯರನ್ನಾಗಿ ಮೋದಿ ಅವರು ನೇಮಕ ಮಾಡಿದ್ದಾರೆ. ಯಡಿಯೂರಪ್ಪ ಅವರು ದೆಹಲಿ, ಗುಜರಾತ್, ಕಾಶ್ಮೀರದ ಪಕ್ಷದ ವಿದ್ಯಮಾನಗಳ ಬಗ್ಗೆ ಯೋಚಿಸಬೇಕು. ಅವರು ರಾಷ್ಟ್ರಮಟ್ಟದ ಸಂಗತಿಗಳತ್ತ ಗಮನ ಹರಿಸಲಿ ಎಂದು ಸಲಹೆ ನೀಡಿದ್ದಾರೆ.

Join Whatsapp