ಉತ್ತಮ ರಸ್ತೆಗಳಿಂದ ಅಪಘಾತ ಜಾಸ್ತಿಯಾಗುತ್ತಿದೆ ಎಂದ ಮಧ್ಯಪ್ರದೇಶದ ಬಿಜೆಪಿ ಶಾಸಕ

Prasthutha|

ಖಾಂಡ್ವಾ: ಉತ್ತಮ ರಸ್ತೆಗಳಿಂದ ಅಪಘಾತಗಳು ಜಾಸ್ತಿಯಾಗುತ್ತಿದೆ ಎಂದು ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯ ಮಂಧಾನ ವಿಧಾನಸಭಾ ಕ್ಷೇತ್ರದ ಶಾಸಕ ನಾರಾಯಣ ಪಟೇಲ್ ವಿಚಿತ್ರ ಹೇಳಿಕೆಯೊಂದನ್ನು ನೀಡಿದ್ದಾರೆ.

- Advertisement -

ಕೆಟ್ಟ ರಸ್ತೆಗಳು ಕಡಿಮೆ ರಸ್ತೆ ಅಪಘಾತಗಳಿಗೆ ಕಾರಣವಾಗುತ್ತವೆ ಎಂದು ನೀವು ನಂಬುತ್ತೀರಾ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಉತ್ತಮ ರಸ್ತೆಗಳು ಹೆಚ್ಚಿನ ವೇಗದ ಸಂಚಾರಕ್ಕೆ ಕಾರಣವಾಗುವುದರಿಂದ ಅಪಘಾತಗಳು ಜಾಸ್ತಿಯಾಗುತ್ತಿವೆ. ಚಾಲಕರು ವಾಹನಗಳ ಮೇಲಿನ ನಿಯಂತ್ರಣವನ್ನು ಕಳೆದುಕೊಂಡು ಅಪಾಯವನ್ನುಂಟು ಮಾಡುತ್ತಾರೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ನನ್ನ ಕ್ಷೇತ್ರದಲ್ಲಿ ರಸ್ತೆ ಅಪಘಾತಗಳು ಹೆಚ್ಚುತ್ತಿವೆ. ರಸ್ತೆಗಳು ಉತ್ತಮವಾಗಿರುವುದರಿಂದ ವಾಹನಗಳು ಹೆಚ್ಚಿನ ವೇಗದಲ್ಲಿ ಚಲಿಸುತ್ತವೆ. ಹೀಗೆ ಚಲಿಸುವಾಗ ನಿಯಂತ್ರಣವನ್ನು ಕಳೆದುಕೊಂಡು ಅಪಾಯವನ್ನುಂಟು ಮಾಡುತ್ತದೆ. ನಾನು ಇದನ್ನು ಅನುಭವಿಸಿದ್ದೇನೆ. ಕೆಲವು ಚಾಲಕರು ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಾರೆ. ಇದು ಅಪಘಾತಗಳಿಗೆ ಕಾರಣವಾಗುತ್ತದೆ” ಎಂದು ಪಟೇಲ್ ಹೇಳಿದ್ದಾರೆ.



Join Whatsapp