ಹೈದರಾಬಾದ್: ಸಾಮೂಹಿಕ ಅತ್ಯಾಚಾರದ ವೀಡಿಯೋ ವೈರಲ್ ಮಾಡಿದ ಬಿಜೆಪಿ ಶಾಸಕನ ವಿರುದ್ಧ ಪ್ರಕರಣ

Prasthutha|

ಹೈದರಾಬಾದ್: ಇತ್ತೀಚೆಗೆ ಹೈದರಾಬಾದ್ ನಲ್ಲಿ ನಡೆದ ಅಪ್ರಾಪ್ತೆಯ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದ ವೀಡಿಯೋವನ್ನು ವೈರಲ್ ಮಾಡಿದ ಬಿಜೆಪಿ ಶಾಸಕ ಎಂ. ರಘುನಂದನ್ ರಾಮ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

- Advertisement -

ಹಿರಿಯ ವಕೀಲರೊಬ್ಬರು ಅಬಿಡ್ಸ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನನ್ವಯ ರಘುನಂದನ್ ರಾವ್ ವಿರುದ್ಧ ಐಪಿಸಿ ಸೆಕ್ಷನ್ 228 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಠಾಣಾಧಿಕಾರಿ, ಸೋಮವಾರ ತಡರಾತ್ರಿ ದೂರು ದಾಖಲಿಸಲಾಗಿದೆ. ಕಾನೂನು ತಜ್ಞರ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದ್ದಾರೆ.

- Advertisement -

ಲೈಂಗಿಕ ದೌರ್ಜನ್ಯಕ್ಕೊಳಗಾದವರ ಗುರುತು, ಹೆಸರು ಅಥವಾ ಯಾವುದೇ ವಿಷಯಗಳನ್ನು ಬಹಿರಂಗಪಡಿಸುವುದು ಕಾನೂನು ಪ್ರಕಾರ ಅಪರಾಧವಾಗಿದ್ದು, ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ



Join Whatsapp