Home ಟಾಪ್ ಸುದ್ದಿಗಳು ಹೈದರಾಬಾದ್: ಸಾಮೂಹಿಕ ಅತ್ಯಾಚಾರದ ವೀಡಿಯೋ ವೈರಲ್ ಮಾಡಿದ ಬಿಜೆಪಿ ಶಾಸಕನ ವಿರುದ್ಧ ಪ್ರಕರಣ

ಹೈದರಾಬಾದ್: ಸಾಮೂಹಿಕ ಅತ್ಯಾಚಾರದ ವೀಡಿಯೋ ವೈರಲ್ ಮಾಡಿದ ಬಿಜೆಪಿ ಶಾಸಕನ ವಿರುದ್ಧ ಪ್ರಕರಣ

ಹೈದರಾಬಾದ್: ಇತ್ತೀಚೆಗೆ ಹೈದರಾಬಾದ್ ನಲ್ಲಿ ನಡೆದ ಅಪ್ರಾಪ್ತೆಯ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದ ವೀಡಿಯೋವನ್ನು ವೈರಲ್ ಮಾಡಿದ ಬಿಜೆಪಿ ಶಾಸಕ ಎಂ. ರಘುನಂದನ್ ರಾಮ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಹಿರಿಯ ವಕೀಲರೊಬ್ಬರು ಅಬಿಡ್ಸ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನನ್ವಯ ರಘುನಂದನ್ ರಾವ್ ವಿರುದ್ಧ ಐಪಿಸಿ ಸೆಕ್ಷನ್ 228 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಠಾಣಾಧಿಕಾರಿ, ಸೋಮವಾರ ತಡರಾತ್ರಿ ದೂರು ದಾಖಲಿಸಲಾಗಿದೆ. ಕಾನೂನು ತಜ್ಞರ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದ್ದಾರೆ.

ಲೈಂಗಿಕ ದೌರ್ಜನ್ಯಕ್ಕೊಳಗಾದವರ ಗುರುತು, ಹೆಸರು ಅಥವಾ ಯಾವುದೇ ವಿಷಯಗಳನ್ನು ಬಹಿರಂಗಪಡಿಸುವುದು ಕಾನೂನು ಪ್ರಕಾರ ಅಪರಾಧವಾಗಿದ್ದು, ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ

Join Whatsapp
Exit mobile version