ಜಾತಿನಿಂದನೆ ಪ್ರಕರಣ: ಬಿಜೆಪಿ ಶಾಸಕ ಬಿಪಿ ಹರೀಶ್​ಗೆ ನಿರೀಕ್ಷಣಾ ಜಾಮೀನು ಮಂಜೂರು

Prasthutha|

ದಾವಣಗೆರೆ: ಜಾತಿ ನಿಂದನೆ ಪ್ರಕರಣ ಎದುರಿಸುತ್ತಿದ್ದ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ.ಹರೀಶ್​ ಅವರಿಗೆ ದಾವಣಗೆರೆಯ 2ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್​ನಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ.

- Advertisement -

ಮಾದಿಗ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಹರೀಶ್,​ ‘ಅಪ್ಪನಿಗೆ ಹುಟ್ಟಿದ ಮಾದಿಗರು ಮಾತ್ರ ಬಿಜೆಪಿಗೆ ಮತ ಹಾಕಿದ್ದಾರೆ’ ಎಂದಿದ್ದರು. ಈ ಹಿನ್ನೆಲೆ ಅವರ ವಿರುದ್ಧ ಹರಿಹರ ಠಾಣೆಯಲ್ಲಿ ಜಾತಿ ನಿಂದನೆ ಆರೋಪದಡಿ ಮಾದಿಗ ಸಮುದಾಯ ದೂರು ದಾಖಲಿಸಿತ್ತು.

ಮಾದಿಗ ಸಮುದಾಯಕ್ಕೆ ಬಿಜೆಪಿ ಸರ್ಕಾರ ಒಳಮೀಸಲಾತಿ ನೀಡಿದೆ. ಆದರೆ ಮಾದಿಗರು ಬಿಜೆಪಿಗೆ ಮತ ಹಾಕಿಲ್ಲವೆಂದು ಹರೀಶ್ ವಾಗ್ದಾಳಿ ಮಾಡಿದ್ದರು. ಬಿ.ಪಿ.ಹರೀಶ್ ನೀಡಿದ್ದ ಅವಹೇಳನಕಾರಿ ಹೇಳಿಕೆ ವೈರಲ್ ಆಗಿತ್ತು. 7 ಬಾರಿ ಚುನಾವಣೆಗೆ ಸ್ಪರ್ಧಿಸಿರುವ ಬಿ.ಪಿ.ಹರೀಶ್, 2 ಬಾರಿ ಗೆದಿದ್ದಾರೆ.