ಚುನಾವಣಾ ಪ್ರಚಾರಕ್ಕೆ ಬಂದ ಬಿಜೆಪಿ ಶಾಸಕನನ್ನು ಅಟ್ಟಾಡಿಸಿದ ಗ್ರಾಮಸ್ಥರು

Prasthutha|

ಲಕ್ನೋ: ಮುಂಬರುವ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಚಾರಕ್ಕೆ ಬಂದಿದ್ದ ಬಿಜೆಪಿ ಶಾಸಕರೊಬ್ಬರನ್ನು ಗ್ರಾಮಸ್ಥರು ಅಟ್ಟಾಡಿಸಿ, ವಾಪಸ್ ಕಳುಹಿಸಿರುವ ಘಟನೆ ಮುಜಫ್ಫರ್ ನಗರದಲ್ಲಿ ನಡೆದಿದ್ದು, ಈ ಸಂಬಂಧದ ವೀಡಿಯೋ ವೈರಲ್ ಆಗಿದೆ.

- Advertisement -

ಖತೌಲಿ ಎಂಬಲ್ಲಿನ ಬಿಜೆಪಿ ಶಾಸಕ ವಿಕ್ರಮ್ ಸಿಂಗ್ ಸೈನಿ ಅವರು ಕಾರ್ಯಕರ್ತರೊಂದಿಗೆ ಸಭೆ ನಡೆಸಲು ಬುಧವಾರ ಗ್ರಾಮಕ್ಕೆ ಬಂದಿದ್ದಾಗ ಇಡೀ ಗ್ರಾಮಸ್ಥರು ಶಾಸಕರ ಮೇಲೆ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಹೆದರಿದ ಸಿಂಗ್ ಅಲ್ಲಿಂದ ಕಾಲ್ಕಿತ್ತಿದ್ದಾರೆ.

  ಗ್ರಾಮಸ್ಥರ ಗುಂಪೊಂದು ಶಾಸಕ ಸೈನಿ ಅವರ ಕಾರನ್ನು ಹಿಂಬಾಲಿಸಿ, ಕಾರಿನಿಂದ ಕೆಳಗೆ ಇಳಿಯುವಂತೆ ಕೂಗಾಡುತ್ತಿರುವುದು,   ಶಾಸಕರ ವಿರುದ್ಧ ಘೋಷಣೆ ಕೂಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

- Advertisement -

 ಶಾಸಕ ವಿಕ್ರಮ್ ಸೈನಿ ವಿವಾದಾತ್ಮಕ ಹೇಳಿಕೆಯಿಂದ ಹಿಂದೊಮ್ಮೆ ಕುಖ್ಯಾತಿ ಪಡೆದಿದ್ದರು. ಭಾರತ ಸುರಕ್ಷಿತವಲ್ಲ ಎಂದು ಹೇಳುವವರಿಗೆ 2019ರಲ್ಲಿ ಬಾಂಬ್ ಬೆದರಿಕೆ ಹಾಕಿದ್ದರು. ನಮ್ಮ ದೇಶವನ್ನು ಹಿಂದುಸ್ಥಾನ್ ಎಂದು ಕರೆಯುತ್ತಾರೆ. ಇದು ಹಿಂದುಗಳಿಗೆ ಮಾತ್ರ ಸಂತ, ಗೋವುಗಳನ್ನು ಕೊಲ್ಲುವವರ ಕಾಲುಗಳನ್ನು ಕತ್ತರಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು.

Join Whatsapp