Home ಟಾಪ್ ಸುದ್ದಿಗಳು ಬಿಜೆಪಿ ಮಾಜಿ ಶಾಸಕ ಸಿಎಂ ನಿಂಬಣ್ಣವರ್ ನಿಧನ

ಬಿಜೆಪಿ ಮಾಜಿ ಶಾಸಕ ಸಿಎಂ ನಿಂಬಣ್ಣವರ್ ನಿಧನ

ಬೆಂಗಳೂರು: ಬಿಜೆಪಿ ಮಾಜಿ ಶಾಸಕ ಸಿ.ಎಂ ನಿಂಬಣ್ಣವರ್ (77) ಬನ್ನೇರುಘಟ್ಟದ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.

ಕಲಘಟಗಿ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಅವರು, ಕಾಲು ನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಭಾನುವಾರ ಬೆಳಗ್ಗೆ 11:10 ರ ಸಮಯಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪಾರ್ಥಿವ ಶರೀರವನ್ನು ಕಲಘಟಗಿಗೆ ಕೊಂಡೊಯ್ಯಲು ಸಿದ್ಧತೆ ನಡೆಸಲಾಗಿದೆ. ಸೋಮವಾರ ಮಧ್ಯಾಹ್ನ 3 ಗಂಟೆಗೆ ಅಂತ್ಯ ಸಂಸ್ಕಾರ ನೆರವೇರಲಿದೆ.

Join Whatsapp
Exit mobile version