ಲಖನೌ: ಮುಝಫರ್ ನಗರ ಗಲಭೆಯಲ್ಲಿ ಭಾಗಿಯಾಗಿದ್ದ ಬಿಜೆಪಿ ಶಾಸಕ ವಿಕ್ರಮ್ ಸೈನಿ ಅನರ್ಹ ಹಾಗೂ ವಿಧಾನಸಭಾ ಕ್ಷೇತ್ರ ತೆರವಾಗಿರುವುದಾಗಿ ಉತ್ತರ ಪ್ರದೇಶದ ವಿಧಾನಸಭಾ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.
2013ರ ಮುಝಫರ್ ನಗರ ಗಲಭೆಯಲ್ಲಿ ಭಾಗಿಯಾಗಿದ್ದ ಆರೋಪದಡಿ ಖತೌಲಿ ಶಾಸಕ ವಿಕ್ರಮ್ ಸೈನಿ ಅವರಿಗೆ ಜನ ಪ್ರತಿನಿಧಿ ನ್ಯಾಯಾಲಯವು ಅಕ್ಟೋಬರ್ 11 ರಂದು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತು.
ಮುಝಫರ್ ನಗರ ಸಂಸದ/ಶಾಸಕರ ಜನಪ್ರತಿನಿಧಿ ನ್ಯಾಯಾಲಯವು ಸೈನಿಗೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಅಕ್ಟೋಬರ್ 11 ರಿಂದ ಜಾರಿಗೆ ಬರುವಂತೆ ಖತೌಲಿ ವಿಧಾನಸಭಾ ಕ್ಷೇತ್ರ ತೆರವಾಗಿರುವುದಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ದ್ವೇಷ ಭಾಷಣ ಪ್ರಕರಣದಲ್ಲಿ ಎಸ್ಪಿ ಶಾಸಕ ಅಜಂ ಖಾನ್ ಗೆ ಇತ್ತೀಚೆಗೆ ಮೂರು ವರ್ಷಗಳ ಶಿಕ್ಷೆ ವಿಧಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಧಾನಸಭಾ ಕಾರ್ಯದರ್ಶಿ ರಾಂಪುರ ಕ್ಷೇತ್ರ ತೆರವಾಗಿರುವುದಾಗಿ ಅಧಿಸೂಚನೆ ಹೊರಡಿಸಿದ್ದರು.