ಮಂಗಳೂರು| ಮೋದಿ ಕಾರ್ಯಕ್ರಮಕ್ಕೆ ಜನರಿಂದ ಬಾಯ್ಕಾಟ್ ಭೀತಿ : ಮನೆ ಮನೆಗೆ ತೆರಳಿ ಕರಪತ್ರ ಹಂಚುತ್ತಿರುವ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ !

Prasthutha|

ಮಂಗಳೂರು : ಸೆಪ್ಟೆಂಬರ್ 2ರಂದು ಮಂಗಳೂರಿನ ಕೂಳೂರು ಬಳಿಯ ಗೋಲ್ಡ್ ಫಿಂಚ್ ಮೈದಾನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೆ ಭರದ ಸಿದ್ದತೆಗಳೇನೋ ನಡೆದಿದೆ. ಆದರೆ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯ ಜನವಿರೋಧಿ ನೀತಿಗಳಿಂದಾಗಿ ಬೇಸತ್ತಿರುವ ಜನರು ಮೋದಿ ಕಾರ್ಯಕ್ರಮವನ್ನು ಬಾಯ್ಕಾಟ್ ಮಾಡುತ್ತಾರೇನೋ ಎಂಬ ಭೀತಿ ಬಿಜೆಪಿಗೆ ಎದುರಾಗಿದೆ. ಆ ಕಾರಣಕ್ಕಾಗಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾಗಿರುವ ವೇದವ್ಯಾಸ ಕಾಮತ್ ಅವರು ಚುನಾವಣೆ ಸಮಯದಲ್ಲಿ ಮತಯಾಚನೆ ಮಾಡುವ ಶೈಲಿಯಲ್ಲಿ ನಗರದ ಮನೆ ಮನೆಗಳಿಗೆ ಭೇಟಿ ನೀಡಿ, ಕರಪತ್ರ ಹಂಚುತ್ತಾ ಮೋದಿ ಕಾರ್ಯಕ್ರಮಕ್ಕೆ ಬರುವಂತೆ ಜನರನ್ನು ಆಹ್ವಾನಿಸುತ್ತಿರುವುದು ಕಂಡು ಬಂದಿದೆ.     

- Advertisement -

ಈ ವಿಚಾರದ ಕುರಿತು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಸಾರ್ವಜನಿಕರನ್ನು ಆಹ್ವಾನಿಸುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಮನೆ ಮನೆಗೆ ತೆರಳಿ ಕರಪತ್ರ ಹಂಚುತಿದ್ದಾರೆ. ಈಗಾಗಲೇ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಪ್ರತಿ ಮನೆಗೂ ಕಾರ್ಯಕರ್ತರು ತೆರಳಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದು ನಿರೀಕ್ಷೆಗೂ ಮೀರಿದ ಜನ ಸೇರಲಿದ್ದಾರೆ ಎಂದು ಹೇಳಿದ್ದಾರೆ.

ಶಾಸಕರ ಮಾತುಗಳೇನೇ ಇದ್ದರೂ  ಈ ಮನೆ ಮನೆ ಭೇಟಿಯ ಉದ್ದೇಶದ ಹಿಂದೆ ಜನರು ಮೋದಿಯ ಕಾರ್ಯಕ್ರಮಕ್ಕೆ ಬೆನ್ನು ತಿರುಗಿಸುವ ಭಯವೂ ಬಿಜೆಪಿಗೆ ಇದೆ ಎಂದು ಸಾರ್ವಜನಿಕರು ಆಡಿಕೊಳ್ಳುತ್ತಿದ್ದಾರೆ. ಒಟ್ಟಾರೆಯಾಗಿ ಮೋದಿಯ ಕಾರ್ಯಕ್ರಮ ಬಿಜೆಪಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು,  ಲಕ್ಷಾಂತರ ರೂಪಾಯಿಗಳನ್ನು ಖರ್ಚು ಮಾಡಿ, ಸಾವಿರಾರು ಬಸ್ಸುಗಳನ್ನು ಬುಕ್ ಮಾಡಿ ಜನ ಸೇರಿಸಲು ಹರ ಸಾಹಸ ಪಡುತ್ತಿದ್ದಾರೆ ಎನ್ನುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.   

Join Whatsapp