Home ಟಾಪ್ ಸುದ್ದಿಗಳು ಬಿಜೆಪಿ ಶಾಸಕ ಗೂಳಿಹಟ್ಟಿ ತಾಯಿ ಕ್ರೈಸ್ತ ಧರ್ಮಕ್ಕೆ | ಬಲವಂತದ ಮತಾಂತರವಲ್ಲ

ಬಿಜೆಪಿ ಶಾಸಕ ಗೂಳಿಹಟ್ಟಿ ತಾಯಿ ಕ್ರೈಸ್ತ ಧರ್ಮಕ್ಕೆ | ಬಲವಂತದ ಮತಾಂತರವಲ್ಲ

ಚಿತ್ರದುರ್ಗ : ಹೊಸದುರ್ಗ ತಾಲೂಕು ವ್ಯಾಪ್ತಿಯಲ್ಲಿ ಕ್ರಿಶ್ಚಿಯನ್ ಧರ್ಮಕ್ಕೆ ಬಲವಂತದ ಮತಾಂತರ ನಡೆದಿರುವುದಕ್ಕೆ ದಾಖಲೆಗಳು ಲಭ್ಯವಾಗಿಲ್ಲ. ಕೆಲವರು ಸ್ವಯಂ ಪ್ರೇರಿತರಾಗಿ ಕ್ರೈಸ್ತ ಧರ್ಮಕ್ಕೆ ಮತಾಂತರವಾಗುತ್ತಿದ್ದಾರೆ ಎಂದು ಪೊಲೀಸರ ತನಿಖಾ ವರದಿಯಿಂದ ಬೆಳಕಿಗೆ ಬಂದಿದೆ.

 ಶಾಸಕ ಡಿ. ಗೂಳಿಹಟ್ಟಿ ಶೇಖರ್ ಅವರ ತಾಯಿ ಪುಟ್ಟಮ್ಮ ಸೇರಿ ಹೊಸದುರ್ಗ ತಾಲೂಕಿನ ಹಲವರು ಬಲವಂತದಿಂದ ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿದ್ದಾರೆ ಎಂಬ ದೂರು ಕೇಳಿ ಬಂದ ಕಾರಣ ಮೂರು ತಿಂಗಳ ಹಿಂದೆ ಪೊಲೀಸರು ತನಿಖೆ ನಡೆಸಿದ್ದರು.

ಮತಾಂತರಕ್ಕೆ ಸಂಬಂಧಿಸಿದ ಆರೋಪ ಕೇಳಿ ಬಂದಿದ್ದರಿಂದ ಸ್ವಯಂ ಪ್ರೇರಿತವಾಗಿ ತನಿಖೆ ನಡೆಸಲಾಗಿತ್ತು. ಶಾಸಕ ಗೂಳಿಹಟ್ಟಿ ಶೇಖರ್ ತಾಯಿ ಪುಟ್ಟಮ್ಮ ಅವರ ಹೇಳಿಕೆಯನ್ನು ಪಡೆಯಲಾಗಿದೆ. ಹಲವು ವರ್ಷಗಳಿಂದ ಸ್ವಯಂಪ್ರೇರಿತವಾಗಿ ಚರ್ಚ್ ಗೆ ಹೋಗುತ್ತಿರುವುದಾಗಿ ಸ್ಪಷ್ಟನೆ ನೀಡಿದ್ದಾರೆ. ಬಲವಂತದ ಮತಾಂತರ ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ರಾಧಿಕಾ ಮಾಹಿತಿ ನೀಡಿದ್ದಾರೆ.

Join Whatsapp
Exit mobile version