ಪ್ರವಾದಿ‌ ನಿಂದಕ ಬಿಜೆಪಿ ಶಾಸಕನಿಗೆ ಜಾಮೀನು

Prasthutha|

ಹೈದರಾಬಾದ್: ಪ್ರವಾದಿ ಮುಹಮ್ಮದ್‌ರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಬಂಧನಕ್ಕೊಳಗಾಗಿದ್ದ ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರಿಗೆ ಬಂಧನದ ಕೆಲವೇ ಗಂಟೆಗಳಲ್ಲಿ ನ್ಯಾಯಾಲಯ ಜಾಮೀನು ನೀಡಿದೆ.

- Advertisement -

ಬಂಧನದ ಸಂದರ್ಭದಲ್ಲಿ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 41 ಅನ್ನು ಅನುಸರಿಸಿಲ್ಲ ಎಂದು ಗಮನಿಸಿದ ನಂತರ ನ್ಯಾಯಾಲಯ ಅವರನ್ನು ಬಿಡುಗಡೆ ಮಾಡಲು ಆದೇಶಿಸಿದೆ.

ಪ್ರವಾದಿ ಮುಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆಯ ಆರೋಪದಲ್ಲಿ ಟಿ ರಾಜಾಸಿಂಗ್ ವಿರುದ್ಧ ಪ್ರಕರಣ ದಾಖಲಾಗಿತ್ತು. ನಂತರ ಬಂಧಿಸಲ್ಪಟ್ಟಿದ್ದ ಟಿ ರಾಜಾ ಸಿಂಗ್‌ನ್ನು ಎಚ್ಚರಿಕೆ ನೀಡಿ ಬಿಡುಗಡೆ ಮಾಡಲಾಗಿದೆ.

Join Whatsapp
Exit mobile version