Home ಟಾಪ್ ಸುದ್ದಿಗಳು ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆ ಸ್ವಾಗತಿಸಿದ ಬಿಜೆಪಿ ಶಾಸಕ ಗುರುರಾಜ್ ಗಂಟಿಹೋಳಿ

ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆ ಸ್ವಾಗತಿಸಿದ ಬಿಜೆಪಿ ಶಾಸಕ ಗುರುರಾಜ್ ಗಂಟಿಹೋಳಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯನ್ನು ಬೈಂದೂರಿನ ಬಿಜೆಪಿ ಶಾಸಕ ಗುರುರಾಜ್ ಗಂಟಿಹೋಳಿ ಸ್ವಾಗತಿಸಿದ್ದಾರೆ.


ವಿಧಾನಸಭೆಯಲ್ಲಿಂದು ಕಾಂಗ್ರೆಸ್ ಸರ್ಕಾರದ ಬಜೆಟ್ ಮೇಲೆ ಚರ್ಚೆ ನಡೆಯಿತು. ಈ ವೇಳೆ ಮಾತನಾಡಿದ ಬಿಜೆಪಿ ಶಾಸಕ ಗುರುರಾಜ್ ಗಂಟಿಹೋಳಿ, ಅನ್ನಭಾಗ್ಯ ಯೋಜನೆಯನ್ನ ಸ್ವಾಗತಿಸಿದರು. ಯೋಚನೆ ಮತ್ತು ಯೋಜನೆ ರೂಪಿಸಿದವರಿಗೆ ಅಭಿನಂದನೆ, ಬಡವರ ಹೊಟ್ಟೆ ತುಂಬಿಸುವ ಯೋಜನೆ. ಯಾವುದೇ ಸರ್ಕಾರ ಈ ಯೋಜನೆ ಜಾರಿ ಮಾಡಿರಲಿ, ನಾನು ಸ್ವಾಗತ ಮಾಡುತ್ತೇನೆ ಎಂದು ನುಡಿದರು.

Join Whatsapp
Exit mobile version