ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ!

Prasthutha|

►ಪತ್ರಿಕಾಗೋಷ್ಠಿಯಲ್ಲಿ ತೇಜಸ್ವಿ ಸೂರ್ಯರ ಜೊತೆಗಿದ್ದ ಶಾಸಕ!

- Advertisement -

ಬೆಂಗಳೂರು: ರಾಜ್ಯದಲ್ಲಿ ತೀವ್ರವಾಗಿ ಹೆಚ್ಚುತ್ತಿರುವ ಕೊರಾನಾದ ನಡುವೆ ಬೆಂಗಳೂರಿನಲ್ಲಿ ನಡೆದಿರುವ ಬೆಡ್‌ ಬ್ಲಾಕಿಂಗ್‌ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ಪ್ರಕರಣದಲ್ಲಿ ಬಿಜೆಪಿ ಶಾಸಕ ಸತೀಶ್‌ ರೆಡ್ಡಿ ಶಾಮೀಲಾಗಿರುವುದು ಬೆಳಕಿಗೆ ಬಂದಿದೆ.

ದಂಧೆಯಲ್ಲಿ ಬಿಜೆಪಿ ಶಾಸಕ ಶಾಮೀಲಾಗಿರುವುದರಿಂದ ಬಿಬಿಎಂಪಿ ದಕ್ಷಿಣ ವಲಯದ ವಾರ್ ರೂಮ್ ನಲ್ಲಿ ನಡೆಯುತ್ತಿದ್ದ ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಶಾಮೀಲಾಗಿರುವವರು ಒಂದೇ ಸಮುದಾಯಕ್ಕೆ ಸೇರಿದವರೆಂದು ಮುಸ್ಲಿಂ ಸಮುದಾಯದ ಯುವಕರನ್ನು ಗುರಿಯಾಗಿಸಿ ಗಂಭೀರ ಆರೋಪ ಮಾಡಿರುವ ತೇಜಸ್ವಿ ಸೂರ್ಯ ಅವರಿಗೆ ತೀವ್ರ ಮುಖಭಂಗ ಉಂಟಾಗಿದೆ.  

- Advertisement -

ಬಿಜೆಪಿ ಶಾಸಕ ಸತೀಶ್ ರೆಡ್ಡಿ ವಾರ್ ರೂಮ್ ನಲ್ಲಿ  ತಮಗೆ ಬೇಕಾದವರಿಗೆ ಹಾಸಿಗೆಗಳನ್ನು ಕೊಡಿಸುತ್ತಿದ್ದರು ಎನ್ನುವ ಆರೋಪ ಕೇಳಿ ಬಂದಿದ್ದು, ಬೊಮ್ಮನಹಳ್ಳಿ ವಲಯದ ವಾರ್‌ ರೂಂನಲ್ಲಿ ಕೆಲಸ ಮಾಡುತ್ತಿದ್ದವರಿಗೆ ಬಿಜೆಪಿ ಶಾಸಕ ಸತೀಶ್‌ ರೆಡ್ಡಿ ಹಾಗೂ ಆತನ ಬೆಂಬಲಿಗರು ಧಮ್ಕಿ ಹಾಕಿ ಹಾಸಿಗೆಗಳನ್ನು ನೀಡುತ್ತಿದ್ದರು ಎನ್ನಲಾಗಿದೆ.

ವಾರ್ ರೂಮ್‌ನಲ್ಲಿ ಕೆಲಸ ಮಾಡುತ್ತಿರವವರಲ್ಲಿ ತಮ್ಮ ಬೆಂಬಲಿಗರಿಗೆ ಹೆಚ್ಚಿನ ಅವಕಾಶವನ್ನು ನೀಡಬೇಕು ಇಲ್ಲವಾದಲ್ಲಿ ವಾರ್‌ ರೂಮ್‌ ಮುಂದೆ ಪ್ರತಿಭಟನೆ ನಡೆಸಲು ಕೂಡ ಶಾಸಕರು ತಮ್ಮ ಬೆಂಬಲಿಗರು ಹಾಗೂ ಕಾರ್ಯಕರ್ತರೊಂದಿಗೆ ಆಗಮಿಸುತ್ತಿದ್ದರು ಎನ್ನಲಾಗಿದೆ.

 ಇನ್ನೂ ಶಾಸಕ ಸತೀಶ್‌ ರೆಡ್ಡಿ ಅವರು ಬೆಡ್ ಬ್ಲಾಕಿಂಗ್ ದಂಧೆ ನಡೆಸುತ್ತಿದ್ದ ನಡುವೆ ವಾರ್‌ ರೂಮ್‌ನಲ್ಲಿ ಬಂದು ಬೊಬ್ಬೆ ಹಾಕಿದ್ದ ಸಂಸದ ತೇಜಸ್ವಿ ಸೂರ್ಯ ಅವರ ಬಗ್ಗೆ ಕೂಡ ಜನತೆ ಅನುಮಾನಗೊಂಡಿದ್ದು, ತೇಜಸ್ವಿ ಸೂರ್ಯ ಅವರು ವಾರ್‌ ರೂಮ್‌ನಲ್ಲಿ ನಡೆದುಕೊಂಡಿದ್ದ ನಡವಳಿಕೆ ಬಗ್ಗೆ ಜನತೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

Join Whatsapp