ಮೀಸಲಾತಿ ತೆಗೆದು ಒಗೀರಿ: ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ ಜಗದೀಶ್

Prasthutha|

ಬಾಲಕೋಟೆ: ಮೀಸಲಾತಿ ತೆಗೆದು ಒಗೀರಿ ಎಂದು ಜಮಖಂಡಿ ಬಿಜೆಪಿ ಶಾಸಕ ಜಗದೀಶ್ ಹೇಳಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇದೀಗ ಅದು ಭಾರೀ ವಿವಾದಕ್ಕೆ ಕಾರಣವಾಗಿದೆ.

- Advertisement -


ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರ ಗ್ರಾಮದ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಮೀಸಲಾತಿ ತೆಗೆಯಿರಿ, ಎಲ್ಲರೂ ಟಾಪ್ ಕ್ಲಾಸ್ನಲ್ಲಿ ಬಂದುಬಿಡುತ್ತಾರೆ ಎಂದು ಹೇಳಿದ್ದಾರೆ.
ಕುಲಕುಲವೆಂದು ಬಡಿದಾಡದಿರಿ ಎಂದು ಕನಕದಾಸರು ಹೇಳಿದ್ದಾರೆ. ಕುಲಕುಲವೆಂದು ಬಡಿದಾಡದಿರಿ, ಕುಲದ ನೆಲೆಯನ್ನೇನಾದ್ರೂ ಬಲ್ಲಿರಾ? ಹಾಗೇ ನೋಡಿದರೆ ಕುಲ ಎನ್ನುವುದು ಇಲ್ಲವೇ ಇಲ್ಲ. ಏನಾದ್ರು ಸಿಗುತ್ತೆ ಅಂತ ಮೀಸಲಾತಿ ಸಂಬಂಧ ಬಡಿದಾಟ ನಡೆಯುತ್ತಿದೆ. ಮೀಸಲಾತಿ ತೆಗೆಯಿರಿ, ಎಲ್ಲರೂ ಟಾಪ್ ಕ್ಲಾಸ್ ನಲ್ಲಿ ಬಂದುಬಿಡುತ್ತಾರೆ ಎಂದು ಹೇಳಿದ್ದಾರೆ.


ಈ ಬಗ್ಗೆ ಜಮಖಂಡಿಯ ದೇಸಾಯಿ ಸರ್ಕಲ್ ನಲ್ಲಿ ಇಂದು(ಬುಧವಾರ) ಅಂಬೇಡ್ಕರ್ ಸೇನೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಶಾಸಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.

Join Whatsapp