ರಾಜಸ್ಥಾನ ಬಿಜೆಪಿ ಶಾಸಕಿ ಕಿರಣ್ ಮಹೇಶ್ವರಿ ಕೊರೊನಗೆ ಬಲಿ

Prasthutha|

ಜೈಪುರ : ರಾಜಸ್ಥಾನದ ರಾಜಸಮಂದ್ ಬಿಜೆಪಿ ಶಾಸಕ ಕಿರಣ್ ಮಹೇಶ್ವರಿ ಕೊರೊನ ಸೋಂಕಿನಿಂದ ಮೃತಪಟ್ಟಿದ್ದಾರೆ. ಗುರುಗ್ರಾಮ್ ನ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ ಅವರು ನಿಧನರಾಗಿದ್ದಾರೆ.

- Advertisement -

ಕಳೆದ ತಿಂಗಳು ಕೊರೊನ ಪಾಸಿಟಿವ್ ವರದಿ ಬಂದಿದ್ದ ನಂತರದಲ್ಲಿ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ನವೆಂಬರ್ ಮೊದಲ ವಾರ ಅವರು ಗುರುಗ್ರಾಮ್ ನ ಮೇದಾಂತ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ರಾತ್ರಿ ನಿಧನರಾಗಿದ್ದಾರೆ.

ರಾಜಸ್ಥಾನದ ಉದಯಪುರ ಕ್ಷೇತ್ರದಿಂದ 2006 ರಿಂದ 2009 ರವರೆಗೆ 14ನೇ ಲೋಕಸಭೆ ಸದಸ್ಯರಾಗಿದ್ದರು. ಕೋಟಾ ಉತ್ತರ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆಗೆ ಉಸ್ತುವಾರಿಯಾಗಿ ಅವರು ಕಾರ್ಯನಿರ್ವಹಿಸುತ್ತಿದ್ದರು.

- Advertisement -

ಕಿರಣ್ ಮಹೇಶ್ವರಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ರಾಜ್ಯದ ಪ್ರಗತಿಗೆ, ಬಡವರ ಅಭಿವೃದ್ಧಿಗೆ ಅವರು ಶ್ರಮಿಸಿದ್ದಾರೆ ಎಂದು ಸ್ಮರಿಸಿದ್ದಾರೆ.



Join Whatsapp