“ನಮ್ಮ ಪಕ್ಷದವರೇ ನನ್ನ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ”: ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ಆಕ್ರೋಶ

Prasthutha|

ಚಿಕ್ಕಮಗಳೂರು: ನಮ್ಮ ಪಕ್ಷದವರೇ ನನ್ನ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದು ಮೂಡಿಗೆರೆಯ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ಸ್ವ-ಪಕ್ಷದ ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಈ ಬಗ್ಗೆ ಮಾತನಾಡಿದ ಅವರು, ಬಿಜೆಪಿಯವರು ನಾನು ಕಾಂಗ್ರೆಸ್ ಸೇರುತ್ತೇನೆಂದು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. “ನಾನ್ಯಾಕೆ ಕಾಂಗ್ರೆಸ್ ಗೆ ಹೋಗಲಿ? ನಾನು ಪಕ್ಷದ ನಿಷ್ಠಾಂವತ. ಬಿಜೆಪಿ ಮುಖಂಡರು, ಪಕ್ಷ ನನ್ನನ್ನು ಚೆನ್ನಾಗಿ ನೋಡಿಕೊಡಿದೆ. ನಾನು ಕಾಂಗ್ರೆಸ್ ಸೇರುವುದು ಸುಳ್ಳು, ಇದನ್ನು ಯಾರೂ ನಂಬುವುದಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Join Whatsapp