ಬೆಂಗಳೂರು: ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಕೆಲವೇ ಗಂಟೆಗಳಲ್ಲಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿಗೆ ಬರುವಾಗ ತುಮಕೂರಿನ ಕ್ಯಾತಸಂದ್ರ ಟೋಲ್ ಬಳಿ ಪೊಲೀಸರು ಬಂಧಿಸಿದ್ದಾರೆ.
ಕೆಎಸ್ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ A1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮಾರ್ಚ್ 7 ರಂದು ಹೈಕೋರ್ಟ್ ಮಧ್ಯಂತರ ಜಾಮೀನು ಮಜೂರು ಮಾಡಿತ್ತು.