ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಬಿಜೆಪಿ ಶಾಸಕ ಎಂ ಪಿ ಕುಮಾರಸ್ವಾಮಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾಯಮೂರ್ತಿ ನ್ಯಾ.ಜೆ.ಪ್ರೀತ್ ತೀರ್ಪು ನೀಡಿದ್ದಾರೆ.
ಹೂವಪ್ಪಗೌಡ ಎಂಬವರಿಂದ ಎಂ.ಪಿ.ಕುಮಾರಸ್ವಾಮಿ 1.35 ಕೋಟಿ ರೂ. ಸಾಲ ಪಡೆದಿದ್ದರು. ಈ ಹಣ ಪಾವತಿ ಸಂಬಂಧ ಕುಮಾರಸ್ವಾಮಿ 8 ಚೆಕ್ ನೀಡಿದ್ದರು. ಆದರೆ ಈ ಎಲ್ಲಾ ಚೆಕ್ ಬೌನ್ಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ಹೂವಪ್ಪ ಗೌಡ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು.
ಎಂ ಪಿ ಕುಮಾರಸ್ವಾಮಿ ಅವರು ಸದ್ಯ ಸಾಲದ ಹಣವನ್ನು ತಕ್ಷಣವೇ ಪಾವತಿ ಮಾಡಬೇಕು. ಇಲ್ಲವಾದಲ್ಲಿ 8 ಕೇಸ್ ಗಳಲ್ಲಿ 4 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.