ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು

Prasthutha|

ಬೆಂಗಳೂರು: ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ, ಹನಿಟ್ರ್ಯಾಪ್ ಗೆ ಬಳಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿನಗರದ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರು ಮಾಡಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಪ್ರಕಟಿಸಿದೆ.

- Advertisement -


‘ಮುನಿರತ್ನ ಅವರು ಗುತ್ತಿಗೆದಾರನಿಂದ ಲಂಚ ಕೇಳುವ ಸಂದರ್ಭದಲ್ಲಿ ನನ್ನನ್ನು ಗುರಿಯಾಗಿಸಿ ಜಾತಿನಿಂದನೆ ಮಾಡಿದ್ದಾರೆ’ ಎಂದು ಆರೋಪಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾಜಿ ಸದಸ್ಯ ವೇಲುನಾಯ್ಕರ್ ಸಲ್ಲಿಸಿದ್ದ ದೂರಿಗೆ ಸಂಬಂಧಿಸಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿತ್ತು.



Join Whatsapp