ತೆಲಂಗಾಣ ಬಿಜೆಪಿ ಶಾಸಕ ರಾಜಾ ಸಿಂಗ್ ಗೆ ಒಂದು ವರ್ಷ ಜೈಲು

Prasthutha|

ಹೈದರಾಬಾದ್ : ಕೋಮುದ್ವೇಷದ ಭಾಷಣಗಳಿಗಾಗಿ ಕುಖ್ಯಾತಿ ಪಡೆದಿರುವ ಹೈದರಾಬಾದ್ ನ ಬಿಜೆಪಿ ಶಾಸಕ ರಾಜಾ ಸಿಂಗ್ ಗೆ ಒಂದು ವರ್ಷ ಜೈಲು ಶಿಕ್ಷೆಯಾಗಿದೆ. ಸಂಸದರು ಮತ್ತು ಶಾಸಕರಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣ ನಡೆಸುವ ವಿಶೇಷ ಸೆಶನ್ಸ್ ನ್ಯಾಯಾಲಯ ಈ ಆದೇಶ ನೀಡಿದೆ.

- Advertisement -

2015ರಲ್ಲಿ ಪೊಲೀಸ್ ಅಧಿಕಾರಿಯೊಬ್ಬರಿಗೆ ಹಲ್ಲೆ ನಡೆಸಿದ್ದು ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಪ್ರಕರಣದಲ್ಲಿ ಸಿಂಗ್ ಗೆ ಈ ಶಿಕ್ಷೆ ವಿಧಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ ಸಿಂಗ್, ನ್ಯಾಯಾಲಯ ಜಾಮೀನು ನೀಡಿದ್ದು, ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ ನೀಡಿದೆ ಎಂದು ಹೇಳಿದ್ದಾರೆ.

Join Whatsapp