ಭೋಪಾಲ್: ಬಿಜೆಪಿ ಶಾಸಕರ ಪುತ್ರ ಮಧ್ಯಪ್ರದೇಶದಲ್ಲಿ ಗುರುವಾರ ಬುಡಕಟ್ಟು ವ್ಯಕ್ತಿಯೊಬ್ಬನ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಬಿಜೆಪಿ ಶಾಸಕನ ಪ್ರತಿನಿಧಿಯೊಬ್ಬರು ಬುಡಕಟ್ಟು ಜನಾಂಗದ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಒಂದು ತಿಂಗಳ ನಂತರ ಈ ಘಟನೆ ನಡೆದಿದೆ. ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ರಾಜ್ಯದಲ್ಲಿ ನಡೆಯುತ್ತಿರುವ ಅಪರಾಧಗಳ ಖಂಡಿಸಿ ವಾಗ್ದಾಳಿ ನಡೆಸಿದ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್, ಬಿಜೆಪಿ ನಾಯಕರಿಗೆ ಉಳಿದಿರುವ ಕೆಲಸವೆಂದರೆ ಆದಿವಾಸಿಗಳು, ದಲಿತರು, ಮಹಿಳೆಯರು ಮತ್ತು ಎಲ್ಲಾ ಸಮುದಾಯಗಳ ಜನರಿಗೆ ಕಿರುಕುಳ ನೀಡುವುದು ಮಾತ್ರವೇ ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ಸಿಂಗ್ರೌಲಿ ಶಾಸಕ ರಾಮ್ ಲಲ್ಲು ವೈಶ್ಯ ಅವರ ಪುತ್ರ ವಿವೇಕಾನಂದ್ ವೈಶ್ಯ ಗುರುವಾರ ಸಂಜೆ 34 ವರ್ಷದ ಸೂರ್ಯ ಕುಮಾರ್ ಖೈರ್ವಾರ್ ಮೇಲೆ ಗುಂಡು ಹಾರಿಸಿದ್ದಾನೆ. ಈತನ ವಿರುದ್ಧ ಕೊಲೆ ಯತ್ನ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಹಾಗೂ ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.