ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ರಾಜಕೀಯ ನಿವೃತ್ತಿ ಘೋಷಿಸಿದ ಸಚಿವ ಎಸ್. ಅಂಗಾರ

Prasthutha|

ಸುಳ್ಯ: ವಿಧಾನಸಭಾ ಚುನಾವಣೆಗೆ ಸುಳ್ಯ ಕ್ಷೇತ್ರದಿಂದ ಮತ್ತೊಮ್ಮೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬೇಸರಗೊಂಡು ಹಾಲಿ ಬಿಜೆಪಿ ಶಾಸಕ, ಸಚಿವ ಎಸ್. ಅಂಗಾರ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

- Advertisement -

 ಸತತ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅಂಗಾರ ಅವರಿಗೆ ಈ ಬಾರಿ ಟಿಕೆಟ್ ನೀಡಿರಲಿಲ್ಲ. ಅಂಗಾರ ಬದಲು ಭಾಗೀರಥಿ ಮುರುಳ್ಯ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅಂಗಾರ, ಟಿಕೆಟ್ ಸಿಗದ ಬಗ್ಗೆ ಅಸಮಾಧಾನವಲ್ಲ. ಆದರೆ ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಗೌರವಿಸುವ ಕ್ರಮ ಇದಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -

ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ. ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ. ಅದೇ ನನಗೆ ಹಿನ್ನಡೆಯಾಯಿತು ಎಂದು ವರಿಷ್ಠರ ವಿರುದ್ಧ ಹರಿಹಾಯ್ದರು.

ನಾನು ಇನ್ನು ರಾಜಕಾರಣದಲ್ಲಿ ಇರುವುದಿಲ್ಲ. ಚುನಾವಣಾ ಪ್ರಚಾರ ಕಣದಲ್ಲೂ ಇರುವುದಿಲ್ಲ. ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು ಎಂದು ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವುದಿಲ್ಲ ಎಂದು ನೇರವಾಗಿಯೇ ಸ್ಪಷ್ಟಪಡಿಸಿದ್ದಾರೆ.



Join Whatsapp