ಬೆಂಗಳೂರು: ಯಶವಂತಪುರದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಅವರು ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಪುಟ್ಟಣ್ಣ ಪರ ಮತಯಾಚನೆ ಮಾಡಿದ್ದಾರೆ.
ಯಶವಂತಪುರ ವಿಧಾನಸಭಾ ಕ್ಷೇತ್ರದ ಶಿಕ್ಷಕರ ಜೊತೆ ಸೋಮವಾರ ಸೋಮಶೇಖರ್ ಸಭೆ ನಡೆಸಿದ್ದರು. ಈ ವೇಳೆ ಪುಟ್ಟಣ್ಣಗೆ ಮತ ನೀಡುವಂತೆ ಪ್ರಚಾರ ಮಾಡಿದ್ದಾರೆ. ಸೋಮವಾರದಿಂದ ವಿಧಾನಸಭಾ ಅಧಿವೇಶನ ಆರಂಭವಾಗಿದ್ದು, ಶಾಸಕಾಂಗ ಪಕ್ಷದ ಸಭೆಗೆ ಗೈರಾಗಿ ಪುಟ್ಟಣ್ಣ ಪರ ಪತಯಾಚನೆ ಮಾಡಿದ್ದಕ್ಕೆ ಬಿಜೆಪಿ ನಾಯಕರು ಗರಂ ಆಗಿದ್ದಾರೆ.