ಬಿಜೆಪಿ ಶಾಸಕ ಎಸ್​​ಟಿ ಸೋಮಶೇಖರ್ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆ

Prasthutha|

ಬೆಂಗಳೂರು: ಕಾಂಗ್ರೆಸ್ ಪಕ್ಷವು ಆಪರೇಷನ್ ಹಸ್ತ ಆರಂಭಿಸಿದ್ದು, ಮೊದಲ ಹಂತವಾಗಿ ಯಶವಂತಪುರ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್ ಅವರ ಬೆಂಬಲಿಗರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಲಾಗಿದೆ.

- Advertisement -

 ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಇಂದು ಸೋಮಶೇಖರ್ ಬೆಂಬಲಿಗರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.

ಬಿಬಿಎಂಪಿ ಮಾಜಿ ಸದಸ್ಯರಾದ ಆರ್ಯ ಶ್ರೀನಿವಾಸ್​, ರಾಜಣ್ಣ, ಜಿ.ಪಂ. ಮಾಜಿ ಸದಸ್ಯರಾದ ಶಿವಮಾದಯ್ಯ, ಹನುಮಂತೇಗೌಡ, ತಾಲೂಕು ಪಂಚಾಯತ್ ಮಾಜಿ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾದರು. ಈ ವೇಳೆ, ನೆಲಮಂಗಲ ಕಾಂಗ್ರೆಸ್​​ ಶಾಸಕ ಎನ್.ಶ್ರೀನಿವಾಸ್, ಆನೇಕಲ್ ಕಾಂಗ್ರೆಸ್ ಶಾಸಕ ಬಿ.ಶಿವಣ್ಣ ಉಪಸ್ಥಿತರಿದ್ದರು.

- Advertisement -

ಇದೇ ವೇಳೆ ಮಾತನಾಡಿದ ಮಾಜಿ ಪಾಲಿಕೆ ಸದಸ್ಯ ರಾಜಣ್ಣ,  ಸೋಮಶೇಖರ್ ಅವರಿಗೆ ಬಿಜೆಪಿಯಲ್ಲಿ ಇಲ್ಲಸಲ್ಲದ‌ ಕಾಟ ಕೊಡುತ್ತಿದ್ದಾರೆ. ಹೀಗಾಗಿ ಸೋಮಶೇಖರ್ ಅವರು ಆದಷ್ಟು ಬೇಗ ಕಾಂಗ್ರೆಸ್ ಪಕ್ಷಕ್ಕೆ ಬರಬೇಕು ಎಂದು ವೇದಿಕೆ ಮೇಲೆಯೇ ಆಹ್ವಾನ ನೀಡಿದರು.

ಸೋಮಶೇಖರ್ ಹೆಸರು ಹೇಳದಂತೆ ತಡೆದ ಶಾಸಕ ಶ್ರೀನಿವಾಸ್

ಕೆಪಿಸಿಸಿ ಸಭೆಯಲ್ಲಿ ಮಾತನಾಡುತ್ತಿದ್ದ ಆನೆಕಲ್ ಶಾಸಕ ಶಿವಣ್ಣ ಅವರು, ಸೋಮಶೇಖರ್ ಹೆಸರು ಹೇಳಿದ್ದಾರೆ. ಈ ವೇಳೆ ಸೋಮಶೇಖರ್ ಹೆಸರು ಹೇಳದಂತೆ ನೆಲಮಂಗಲ ಶಾಸಕ ಶ್ರೀನಿವಾಸ್ ಅವರು ತಡೆದಿದ್ದಾರೆ. ಕೂಡಲೇ ಮಾತು‌ ಬದಲಾಯಿಸಿದ ಅವರು, ಸೋಮಶೇಖರ್ ರಾಜಕೀಯ ಬೆಳವಣಿಗೆ ಬಗ್ಗೆ ಹೇಳಿದರು. ನಾನು ಮತ್ತು ಸೋಮಶೇಖರ್ ಒಂದೇ ಬಾರಿಗೆ ಚುನಾವಣೆಗೆ ಸ್ಫರ್ಧೆ ಮಾಡಿದ್ದೆವು.  2004 ರಲ್ಲಿ ನಮಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು. ಎರಡು ಬಾರಿ ಸೋತರೂ ಮತ್ತೆ ಟಿಕೆಟ್ ನೀಡಿತ್ತು. ಇದರರ್ಥ ಕಾಂಗ್ರೆಸ್ ನಮ್ಮ ಕೈಬಿಡಲ್ಲ. ಕೆಲವೊಂದು ‌ಕಾರಣಗಳಿಂದ ಸೋಮಶೇಖರ್ ಬಿಜೆಪಿ ಹೋಗಿದ್ದಾರೆ ಎಂದರು.

Join Whatsapp