Home ಟಾಪ್ ಸುದ್ದಿಗಳು ಬೆಂಗಳೂರು-ಮೈಸೂರು ಹೆದ್ದಾರಿ ಅಪಘಾತಗಳ ಬಗ್ಗೆ ವಿಧಾನಸಭೆಯಲ್ಲಿ ಪ್ರಶ್ನಿಸಿದ ಬಿಜೆಪಿ ಶಾಸಕ ಸುರೇಶ್ ಕುಮಾರ್

ಬೆಂಗಳೂರು-ಮೈಸೂರು ಹೆದ್ದಾರಿ ಅಪಘಾತಗಳ ಬಗ್ಗೆ ವಿಧಾನಸಭೆಯಲ್ಲಿ ಪ್ರಶ್ನಿಸಿದ ಬಿಜೆಪಿ ಶಾಸಕ ಸುರೇಶ್ ಕುಮಾರ್

ಬೆಂಗಳೂರು: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪಘಾತ ಪ್ರಕರಣ ಹೆಚ್ಚಳವಾಗುತ್ತಿರುವುದರ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರವನ್ನು ಪ್ರಶ್ನಿಸಿದ ಬಿಜೆಪಿ ಶಾಸಕ ಸುರೇಶ್ ಕುಮಾರ್, ಅಪಘಾತ ನಿಯಂತ್ರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.


ಇದಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಉತ್ತರ ನೀಡಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿ ನಿರ್ಮಾಣ ಸರಿಯಾಗಿ ಮಾಡಿಲ್ಲ. ಬಹಳಷ್ಟು ನ್ಯೂನತೆಗಳೊಂದಿಗೆ ದಶಪಥ ನಿರ್ಮಾಣವಾಗಿದೆ. ರಸ್ತೆ ತಿರುವುಗಳಲ್ಲಿ ಯಾವುದೇ ಸೂಚನಾ ಫಲಕಗಳನ್ನು ಹಾಕಿಲ್ಲ ಎಂದರು.

ಮೈಸೂರು ಹೆದ್ದಾರಿ ಅಪಘಾತಗಳ ಬಗ್ಗೆ ಹೆದ್ದಾರಿಯಲ್ಲಿ ವೇಗವಾಗಿ ವಾಹನ ಬಂದಾಗ ಅಪಘಾತಗಳಾಗ್ತಿವೆ. ಮಾರ್ಚ್ನಲ್ಲಿ 62 ಅಪಘಾತವಾಗಿದ್ದು, 20 ಜನ ಮೃತಪಟ್ಟಿದ್ದಾರೆ. ಮಾರ್ಚ್ನಿಂದ ಜೂನ್ವರೆಗೆ 100 ಸಾವು, 335 ಜನರಿಗೆ ಗಾಯಗಳಾಗಿವೆ. ಸಂಚಾರ ವಿಭಾಗದ ಎಡಿಜಿಪಿ ಎಕ್ಸ್ಪ್ರೆಸ್ ವೈವೇ ಪರಿಶೀಲಿಸಿದ್ದಾರೆ. ಪಾದಚಾರಿಗಳು ಹೆದ್ದಾರಿಗೆ ಬರದಂತೆ ತಂತಿ ಬೇಲಿ ಹಾಕಲು ಕ್ರಮ ಕೈಗೊಳ್ಳಲಾಗುತ್ತಿದೆ. ಕೆಲವು ವಾಹನ ಚಾಲಕರಿಗೆ ಸಂಚಾರಿ ನಿಯಮಗಳು ಗೊತ್ತಿಲ್ಲ. ಶೀಘ್ರವೇ ಹೆದ್ದಾರಿ ಪ್ರಾಧಿಕಾರಕ್ಕೆ ರಾಜ್ಯ ಸರ್ಕಾರ ಪತ್ರ ಬರೆಯುತ್ತೆ. ಅಪಘಾತ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲು ಮನವಿ ಮಾಡುತ್ತೇವೆ ಎಂದು ವಿಧಾನಸಭೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಉತ್ತರಿಸಿದ್ದಾರೆ.

Join Whatsapp
Exit mobile version