ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಹನಿಟ್ರ್ಯಾಪ್: ಬಲೆಗೆ ಕೆಡವಲು ಯತ್ನ

Prasthutha|

ಚಿತ್ರದುರ್ಗ: ಇತ್ತೀಚಿನ ದಿನಗಳಲ್ಲಿ ಹನಿಟ್ರ್ಯಾಪ್ ಪ್ರಕರಣಗಳು ಹೆಚ್ಚುತ್ತಿದ್ದು, ನಗರದ ಬಿಜೆಪಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಅವರನ್ನು ಹನಿಟ್ರ್ಯಾಪ್ ಬಲೆಗೆ ಬೀಳಿಸಲು ಯತ್ನ ನಡೆಸಲಾಗಿದೆ.

- Advertisement -

ಹನಿಟ್ರ್ಯಾಪ್ಗೆ ಯತ್ನ ಸಂಬಂಧ ಈಗಾಗಲೇ ಶಾಸಕರು ಸೈಬರ್ ಪೊಲೀಸರಿಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಳ್ಳಲಾಗಿದೆ.

ಮೊಬೈಲ್ ನಂಬರ್ ಒಂದರಿಂದ ವೀಡಿಯೋ ಕಾಲ್ ಮೂಲಕ ಶಾಸಕರನ್ನು ಸಿಲುಕಿಸುವ ಯತ್ನ ಮಾಡಲಾಗಿದೆ. ಬೆತ್ತಲೆಯಾಗಿದ್ದ ಯುವತಿಯೊಬ್ಬಳು ಶಾಸಕರಿಗೆ ವೀಡಿಯೋ ಕಾಲ್ ಮಾಡಿದ್ದಾಳೆ.

- Advertisement -

ಈ ಸಂಬಂಧ ಶಾಸಕರು ಇದೀಗ ಚಿತ್ರದುರ್ಗ ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ಯಾವುದೋ ಮಹಿಳೆಯ ಖಾಸಗಿ ಅಂಗಾಂಗ ತೋರಿಸಿದರು. ನಂತರ ವಾಟ್ಸಪ್ ಗೆ ಅಶ್ಲೀಲ ವೀಡಿಯೋ ಕಳಿಸಿದ್ದಾರೆ. ವೀಡಿಯೋ ಕಳುಹಿಸಿದ ನಂಬರಿನ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಿ ಎಂದು ತಿಪ್ಪಾರೆಡ್ಡಿ ದೂರಿನಲ್ಲಿ ತಿಳಿಸಿದ್ದಾರೆ. ಚಿತ್ರದುರ್ಗ ಪೊಲೀಸರು ತನಿಖೆ ಆರಂಭಿಸಿದ್ದಾರೆ.



Join Whatsapp