ಬೆಂಗಳೂರು: ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣದಲ್ಲಿ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪತ್ತೆಗೆ ಲೋಕಾಯುಕ್ತ ಪೊಲೀಸರು ಶೋಧ ಮುಂದುವರಿಸಿದ್ದಾರೆ.
ಕೆಎಸ್‌ಡಿಎಲ್ ಅಧ್ಯಕ್ಷರೂ ಆಗಿದ್ದ ವಿರೂಪಾಕ್ಷಪ್ಪ ಪರವಾಗಿ ₹40 ಲಕ್ಷ ಲಂಚ ಪಡೆದ ಅವರ ಮಗ, ಬೆಂಗಳೂರು ಜಲಮಂಡಳಿ ಪ್ರಧಾನ ಲೆಕ್ಕಾಧಿಕಾರಿ ಪ್ರಶಾಂತ್ ಮಾಡಾಳ್ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದ್ದರು. ವಿರೂಪಾಕ್ಷಪ್ಪ ಅವರ ಮನೆಯಲ್ಲಿ ಶುಕ್ರವಾರ ₹6.10 ಕೋಟಿ ನಗದು ವಶಪಡಿಸಿಕೊಳ್ಳಲಾಗಿತ್ತು. ಗುರುವಾರ ರಾತ್ರಿಯೇ ಚನ್ನಗಿರಿಯಿಂದ ಬೆಂಗಳೂರಿಗೆ ಬಂದಿದ್ದ ಶಾಸಕರು, ತಲೆಮರೆಸಿಕೊಂಡಿದ್ದಾರೆ.