ಬೆಳಗಾವಿ: ಉತ್ತರ ಬಿಜೆಪಿ ಶಾಸಕ ಅನಿಲ್ ಬೆನಕೆ ಅವರ ಕಚೇರಿ ಮೇಲೆ ಅಪರಿಚಿತರು ಕಲ್ಲು ಎಸೆದು ಪರಾರಿಯಾಗಿರುವ ಘಟನೆ ಭಾನುವಾರ ತಡರಾತ್ರಿ ನಗರದ ಚವ್ಹಾಟ್ ನಲ್ಲಿ ನಡೆದಿದೆ.
ಚವ್ಹಾಟ್ ಗಲ್ಲಿಯಲ್ಲಿರುವ ಕಚೇರಿ ಮೇಲೆ ಕಲ್ಲೆಸೆದಿದ್ದು, ಕಿಟಕಿಯ ಗಾಜು ಪುಡಿಪುಡಿಯಾಗಿವೆ. ಕಲ್ಲು ತೂರಾಟ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ ಮಾರ್ಕೆಟ್ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಕಚೇರಿ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.