ಸಿಎಸ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ: ಬಿಜೆಪಿ MLC ರವಿಕುಮಾರ್​ಗೆ ತಾತ್ಕಾಲಿಕ ರಿಲೀಫ್

- Advertisement -

►ಬಲವಂತದ ಕ್ರಮ ಕೈಗೊಳ್ಳದಂತೆ ಮಧ್ಯಂತರ ಆದೇಶ

- Advertisement -

ಬೆಂಗಳೂರು: ಸರ್ಕಾರ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ಎಫ್ಐಆರ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಇಂದು (ಜುಲೈ 04) ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಜುಲೈ 8ರ ವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಮಧ್ಯಂತರ ಆದೇಶ ಹೊರಡಿಸಿದೆ. ಅಲ್ಲದೇ ತನಿಖೆಗೆ ಸಹಕರಿಸಲು ರವಿಕುಮಾರ್ ಗೆ ಕೋರ್ಟ್ ಖಡಕ್ ಸೂಚನೆಯನ್ನು ಸಹ ನೀಡಿದೆ. ರಾಜಕಾರಣಿಗಳು ಬಳಸುವ ಭಾಷೆ ಕೆಳಮಟ್ಟಕ್ಕಿಳಿದಿದೆ ಎಂದು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಪೀಠ ಅಸಮಾಧಾನ ವ್ಯಕ್ತಪಡಿಸಿದೆ.

- Advertisement -

ರವಿಕುಮಾರ್ ಪರವಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದು, ವಿಧಾನಸೌಧದ ಮುಂದೆ ಎನ್.ರವಿಕುಮಾರ್ ಪ್ರತಿಭಟನೆ ನಡೆಸುತ್ತಿದ್ದರು. ಆ ವೇಳೆ ಮುಖ್ಯಮಂತ್ರಿಗಳು, ಸರ್ಕಾರ ಸ್ಪಂದಿಸುತ್ತಿಲ್ಲವೆಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದಾರೆ. ಆದ್ರೆ, ಇದನ್ನು ರಾಜಕೀಯ ಪ್ರೇರಿತವಾಗಿ ಆರೋಪ ಹೊರಿಸಲಾಗಿದೆ ಎಂದು ಕೋರ್ಟ್ ಗೆ ತಿಳಿಸಿದರು.

- Advertisement -


Must Read

Related Articles