ಐಟಿ ದಾಳಿಯಲ್ಲಿ ಸಿಕ್ಕಿರುವುದು ಬಿಜೆಪಿ ಹಣ: ಡಿ.ಕೆ.ಶಿವಕುಮಾರ್

Prasthutha|

ಬೆಂಗಳೂರು: ಐಟಿ ದಾಳಿಯಲ್ಲಿ ಸಿಕ್ಕಿರುವ ಹಣ ಬಿಜೆಪಿಗೆ ಸೇರಿದ್ದು, ಈ ಹಣಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

- Advertisement -


ವಿಧಾನಸೌಧದಲ್ಲಿಂದು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ರಾಜ್ಯದಲ್ಲಿ ಆಗಿರುವ ಭ್ರಷ್ಟಾಚಾರಗಳನ್ನು ಮಾಡಿರುವುದು ಬಿಜೆಪಿ” ಎಂದು ಟೀಕಿಸಿದರು.


“ಇಡೀ ಭ್ರಷ್ಟಾಚಾರಕ್ಕೆ ಬಿಜೆಪಿಯೇ ಅಡಿಪಾಯ. ಅದು ಭ್ರಷ್ಟಾಚಾರದ ಹಿಮಾಲಯ ಇದ್ದಂತೆ. ಹೀಗಾಗಿ ಕರ್ನಾಟಕದ ಜನತೆ ಅವರನ್ನು ಅಧಿಕಾರದಿಂದ ಕಿತ್ತೆಸೆದಿದ್ದಾರೆ. ಈಗ ನಡೆದಿರುವ ಐಟಿ ದಾಳಿಯಲ್ಲಿ ಸಿಕ್ಕಿರುವ ಹಣ ಬಿಜೆಪಿಗೆ ಸೇರಿದ್ದು, ಈ ಹಣಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಈ ಗುತ್ತಿಗೆದಾರರಿಗೆ ಕಾಮಗಾರಿಗಳನ್ನು ನೀಡಿರುವುದು ಬಿಜೆಪಿ ಸರ್ಕಾರ. ಇದು ಬಿಜೆಪಿಯ ಪಾಪದ ಕೂಸು” ಎಂದರು.

Join Whatsapp