ಬಿಜೆಪಿ ಸಂಸದ ಬಾಬುಲ್ ಸುಪ್ರಿಯೋ ಟಿಎಂಸಿ ಸೇರ್ಪಡೆ

Prasthutha|

ನವದೆಹಲಿ: ಇತ್ತೀಚೆಗೆ ನಡೆದ ಮಹತ್ವದ ಬೆಳವಣಿಗೆಯಲ್ಲಿ ರಾಜಕೀಯ ತ್ಯಜಿಸುವುದಾಗಿ ಘೋಷಿಸಿದ್ದ ಬಿಜೆಪಿ ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಅವರು ಇಂದು ಕೋಲ್ಕತ್ತಾದಲ್ಲಿ ಅಧಿಕೃತವಾಗಿ ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮತ್ತು ಆರ್.ಎಸ್. ಡೆರೆಕ್ ಒ’ಬ್ರೇನ್ ಅವರ ಸಮ್ಮುಖದಲ್ಲಿ ಇಂದು ಬಾಬುಲ್ ಸುಪ್ರಿಯೋ ಟಿ.ಎಂ.ಸಿ ಸೇರ್ಪಡೆಗೊಂಡಿದ್ದಾರೆ ಎಂದು ಪಕ್ಷದ ಟ್ವೀಟ್ ನಲ್ಲಿ ಉಲ್ಲೇಖಿಸಿದೆ. ಕಳೆದ ತಿಂಗಳು ಅವರು ರಾಜಕೀಯ ಸನ್ಯಾಸತ್ವವನ್ನು ಸ್ವೀಕರಿಸುವುದಾಗಿ ಘೋಷಿಸಿದ್ದರು.

- Advertisement -

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಾಬುಲ್ ಅವರು, ಸಂಸತ್ ಸದಸ್ಯನಾಗಿ ಮುಂದುವರಿದು ಸಾಂವಿಧಾನಿಕ ಜವಾಬ್ದಾರಿಯನ್ನು ನಿರ್ವಹಿಸುವುದಾಗಿ ತಿಳಿಸಿದ್ದಾರೆ.

- Advertisement -