Home ಟಾಪ್ ಸುದ್ದಿಗಳು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಬಿ.ಎನ್ ಬಚ್ಚೇಗೌಡ ರಾಜೀನಾಮೆ

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಬಿ.ಎನ್ ಬಚ್ಚೇಗೌಡ ರಾಜೀನಾಮೆ

ಚಿಕ್ಕಬಳ್ಳಾಪುರ: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಬಿ.ಎನ್.ಬಚ್ಚೇಗೌಡ ಬುಧವಾರ ರಾಜೀನಾಮೆ ಸಲ್ಲಿಸಿದ್ದಾರೆ.


ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿಗೆ ರಾಜೀನಾಮೆ ಪತ್ರ ತಲುಪಿಸಿದ್ದಾರೆ. ‘ಸ್ವ ಇಚ್ಛೆಯಿಂದ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ರಾಜೀನಾಮೆ ಅಂಗೀಕರಿಸಬೇಕು ಎಂದು ಕೋರುತ್ತೇನೆ’ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಬರೆದಿರುವ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.


2008ರಲ್ಲಿ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಪಡೆದು ಶಾಸಕ, ಸಚಿವ, ಸಂಸದನಾಗಿ ಸಾರ್ವಜನಿಕ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟ ಪಕ್ಷಕ್ಕೆ ಮತ್ತು ಪಕ್ಷದ ಹಿರಿಯ ಮುಖಂಡರಿಗೆ ಧನ್ಯವಾದ ಅರ್ಪಿಸುವುದಾಗಿ ಹೇಳಿದ್ದಾರೆ.

Join Whatsapp
Exit mobile version