ಬಿಜೆಪಿ ಸಂಸದ ಬಿವೈ ರಾಘವೇಂದ್ರ ಮತ್ತೆ ಗೆಲ್ಲಬೇಕು: ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ

Prasthutha|

ಶಿವಮೊಗ್ಗ: ಮುಂದಿನ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಸಂಸದ ಬಿವೈ ರಾಘವೇಂದ್ರ ಅವರು ಗೆಲ್ಲಬೇಕು. ಅವರನ್ನು ಆಯ್ಕೆ ಮಾಡುವುದು ಜನರ ಕರ್ತವ್ಯ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

- Advertisement -

ಶಿವಮೊಗ್ಗದ ಬೆಕ್ಕಿನ ಕಲ್ಮಠದಲ್ಲಿ ಬಸವಶ್ರೀ ಪ್ರಶಸ್ತಿ ಸ್ವೀಕಾರ ಮಾಡಿದ ನಂತರ ಮಾತನಾಡಿದ ಅವರು, ಜಿಲ್ಲೆಯ ಜನರು ಉತ್ತಮ ಸಂಸದರನ್ನು ಆಯ್ಕೆ ಮಾಡಿದ್ದೀರಿ. ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಆಗಿದೆ. ಜನರ ಅಭಿಲಾಷೆಯಂತೆ ರಾಘವೇಂದ್ರ ಅವರು ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಮುಂದಿನ 2-3 ತಿಂಗಳಿನಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಮುಂದೆಯೂ ರಾಘವೇಂದ್ರರನ್ನು ಆಯ್ಕೆ ಮಾಡಬೇಕಿರುವುದು ಜನರ ಕರ್ತವ್ಯ ಎಂದರು.



Join Whatsapp