ಬಿಜೆಪಿ ಸಂಸದ ಶವವಾಗಿ ಪತ್ತೆ, ಆತ್ಮಹತ್ಯೆ ಶಂಕೆ

Prasthutha|

- Advertisement -

ಹೊಸದಿಲ್ಲಿ :  ಹಿಮಾಚಲ ಪ್ರದೇಶದ ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ನವದೆಹಲಿಯ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.  ಸಂಸದರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ. ಮನೆ ಒಳಗಿನಿಂದ ಬಾಗಿಲು ಹಾಕಿ ನೇಣು ಬಿಗಿದ ಸ್ಥಿತಿಯಲ್ಲಿದ್ದ ಸಂಸದರನ್ನು ನೋಡಿದ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಕರೆ ಮಾಡಿದ್ದು, ದೆಹಲಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಶರ್ಮಾ ಅವರ ನಿಧನದ ಹಿನ್ನೆಲೆಯಲ್ಲಿ ಬಿಜೆಪಿ ಸಂಸದೀಯ ಪಕ್ಷದ ಸಭೆ ರದ್ದಾಗಿದೆ. 1958ರಲ್ಲಿ ಹಿಮಾಚಲ ಪ್ರದೇಶದ ಮ೦ಡಿ ಜಿಲ್ಲೆಯಲ್ಲಿ ಜನಿಸಿದ ಶರ್ಮಾ, 2014ರಲ್ಲಿ ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾಗಿದ್ದರು. 2019ರ ಚುನಾವಣೆಯಲ್ಲಿ ಅವರು ಮತ್ತೆ ಮ೦ಡಿಯಿಂದ ಲೋಕಸಭೆಗೆ ಚುನಾಯಿತರಾದರು. ವಿದೇಶಾಂಗ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯಲ್ಲಿಯೂ ಅವರು ಸೇವೆ ಸಲ್ಲಿಸಿದ್ದಾರೆ. ರಾಮ್ ಸ್ವರೂಪ್ ಶರ್ಮಾ ಅವರು ಪತ್ನಿ ಮತ್ತು ಮೂವರು ಪುತ್ರರನ್ನು ಅಗಲಿದ್ದಾರೆ.



Join Whatsapp