ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ಸಂಸದೆ ರೀಟಾ ಜೋಶಿಗೆ 6 ತಿಂಗಳು ಜೈಲು

Prasthutha|

ಲಖನೌ: ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಗಾಗಿ ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿಗೆ ಇಲ್ಲಿನ ನ್ಯಾಯಾಲಯ 6 ತಿಂಗಳು ಜೈಲು ಶಿಕ್ಷೆ ಹಾಗೂ ₹1,100 ದಂಡ ವಿಧಿಸಿ ಶುಕ್ರವಾರ ಆದೇಶಿಸಿದೆ.

- Advertisement -


2012 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಬಿಜೆಪಿಯ ಅಲಹಾಬಾದ್ ಸಂಸದೆ ರೀಟಾ ಬಹುಗುಣ ಜೋಶಿ ಅವರನ್ನು ಲಕ್ನೋ ನ್ಯಾಯಾಲಯ ಶುಕ್ರವಾರ ತಪ್ಪಿತಸ್ಥರೆಂದು ಘೋಷಿಸಿದೆ ಮತ್ತು ಅವರಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಾಲಯವು ಆಕೆಗೆ 1,100 ರೂ.ಗಳ ದಂಡವನ್ನೂ ವಿಧಿಸಿದೆ. ಆ ಸಮಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಿದ್ದ ಜೋಶಿ ಅವರು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಚುನಾವಣಾ ಸಭೆ ನಡೆಸಿದ್ದರು.


ಸಂಸದರ, ಶಾಸಕರ ನ್ಯಾಯಾಲಯದ ವಿಶೇಷ ಹೆಚ್ಚುವರಿ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ ಅಂಬರೀಷ್ಕುಮಾರ್ ಶ್ರೀವಾಸ್ತವ ಶಿಕ್ಷೆ ಪ್ರಕಟಿಸಿದ್ದಾರೆ.



Join Whatsapp