Home ಟಾಪ್ ಸುದ್ದಿಗಳು ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳ ಬಿಡುಗಡೆಗೆ ಕೇಂದ್ರ ಸರ್ಕಾರ ಒಪ್ಪಿದ್ದು ಆಘಾತಕಾರಿ: ಬಿಜೆಪಿ ಸಂಸದ ಸುಬ್ರಮಣಿಯನ್...

ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳ ಬಿಡುಗಡೆಗೆ ಕೇಂದ್ರ ಸರ್ಕಾರ ಒಪ್ಪಿದ್ದು ಆಘಾತಕಾರಿ: ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ

ನವದೆಹಲಿ: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಬಿಡುಗಡೆಗೊಳಿಸಲು ಕೇಂದ್ರ ಗೃಹ ಸಚಿವಾಲಯ ಒಪ್ಪಿಗೆ ಸೂಚಿಸಿತ್ತು ಎಂದು ತಿಳಿದು ಆಘಾತವಾಗಿದೆ ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.


11 ಅಪರಾಧಿಗಳ ಬಿಡುಗಡೆಗೆ ಸಿಬಿಐ ಮತ್ತು ವಿಶೇಷ ನ್ಯಾಯಾಧೀಶರ ವಿರೋಧವಿತ್ತು. ಸಿಬಿಐ ಶಿಫಾರಸನ್ನು ಕಡೆಗಣಿಸಿ ಕೇಂದ್ರ ಸರಕಾರ ಅಪರಾಧಿಗಳ ಬಿಡುಗಡೆಗೆ ಮಾಡಿತ್ತು ಎಂದು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ತಮ್ಮ ಟ್ವೀಟ್ ನಲ್ಲಿ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸುಬ್ರಮಣಿಯನ್ ಸ್ವಾಮಿ ಸುದ್ದಿ ತಿಳಿದು ನನಗೆ ಆಘಾತವಾಗಿದೆ ಎಂದು ಬರೆದಿದ್ದಾರೆ.

Join Whatsapp
Exit mobile version