ಕುಸ್ತಿಪಟುಗಳ ಹೋರಾಟಕ್ಕೆ ಬಿಜೆಪಿ ಸಂಸದೆ ಬೆಂಬಲ

Prasthutha|

ನವದೆಹಲಿ: ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧಿಸುವಂತೆ ಒತ್ತಾಯಿಸಿ ನಡೆಯುತ್ತಿರುವ ಕುಸ್ತಿಪಟುಗಳ ಹೋರಾಟಕ್ಕೆ ಮಹಾರಾಷ್ಟ್ರ ಬಿಜೆಪಿ ಸಂಸದೆ ಪ್ರೀತಮ್ ಮುಂಡೆ ಬೆಂಬಲ ಸೂಚಿಸಿದ್ದಾರೆ.

- Advertisement -


ದೂರಿನ ಪರಿಶೀಲನೆಯ ನಂತರ ಅಧಿಕಾರಿಗಳು ಇದು ಸರಿಯಾಗಿದೆಯೇ? ಇಲ್ಲವೆ ಎಂಬುದನ್ನು ನಿರ್ಧರಿಸಬೇಕು. ನಾನು ಈ ಸರ್ಕಾರದ ಭಾಗವಾಗಿದ್ದೇನೆ. ಆದರೂ ಕುಸ್ತಿಪಟುಗಳೊಂದಿಗೆ ಸರ್ಕಾರ ಸಂವಹನ ನಡೆಸಬೇಕಾದ ರೀತಿಯಲ್ಲಿ ನಡೆದುಕೊಂಡಿಲ್ಲ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಯಾರೇ ದೂರು ನೀಡಿದರೂ ಕ್ರಮ ತೆಗೆದುಕೊಳ್ಳಬೇಕು. ಪ್ರಸ್ತುತ ಪ್ರಕರಣದಲ್ಲಿ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ ಎಂದು ಪ್ರೀತಮ್ ಮುಂಡೆ ಹೇಳಿದ್ದಾರೆ.


ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಅವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಬಗ್ಗೆ ಬಿಜೆಪಿ ಮೌನ ವಹಿಸಿದೆ. ಇದರ ನಡವೆ ಪ್ರೀತಮ್ ಮುಂಡೆ ಹಾಗೂ ಹರಿಯಾಣದ ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್ ಪ್ರತಿಭಟನಕಾರರ ಪರ ದ್ವನಿ ಎತ್ತಿದ್ದಾರೆ.