Home ಟಾಪ್ ಸುದ್ದಿಗಳು ಕೇಂದ್ರದ ‘ಅಗ್ನಿಪಥ್’ ಯೋಜನೆಯ ವಿವಿಧ ನಿಬಂಧನೆಗಳನ್ನು ಪ್ರಶ್ನಿಸಿದ ಬಿಜೆಪಿ ಸಂಸದ ವರುಣ್ ಗಾಂಧಿ

ಕೇಂದ್ರದ ‘ಅಗ್ನಿಪಥ್’ ಯೋಜನೆಯ ವಿವಿಧ ನಿಬಂಧನೆಗಳನ್ನು ಪ್ರಶ್ನಿಸಿದ ಬಿಜೆಪಿ ಸಂಸದ ವರುಣ್ ಗಾಂಧಿ

ನವದೆಹಲಿ: ಕೇಂದ್ರ ಸರಕಾರದ ‘ಅಗ್ನಿಪಥ್’ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ಸಂಸದ ವರುಣ್ ಗಾಂಧಿ, ಅಲ್ಪಾವಧಿಯ ಗುತ್ತಿಗೆ ಆಧಾರದ ಮೇಲೆ ಸೈನಿಕರನ್ನು ನೇಮಕ ಮಾಡುವ ಕೇಂದ್ರದ ‘ಅಗ್ನಿಪಥ್’ ಯೋಜನೆಯ ವಿವಿಧ ನಿಬಂಧನೆಗಳನ್ನು ಪ್ರಶ್ನಿಸಿದ್ದಾರೆ. ಅಲ್ಲದೇ ಈ ನಿಬಂಧನೆಗಳು ಯುವಕರಲ್ಲಿ ಹೆಚ್ಚಿನ ಅಸಮಾಧಾನಕ್ಕೆ ಕಾರಣವಾಗಬಹುದು ಎಂದು ಹೇಳಿದ್ದಾರೆ.

ಈ ಕೂಡಲೇ ಕೇಂದ್ರವು ತನ್ನ ನಿಲುವನ್ನು ಸ್ಪಷ್ಟಪಡಿಸುವಂತೆ ಒತ್ತಾಯಿಸಿ ರಕ್ಷಣಾ ಸಚಿವ ರಾಜನಾಥ್ ಸಿಂಗ್’ಗೆ ವರುಣ್ ಗಾಂಧಿ ಪತ್ರ ಬರೆದಿದ್ದಾರೆ. ನಾಲ್ಕು ವರ್ಷಗಳ ನಂತರ ಶೇಕಡಾ 75 ರಷ್ಟು ಸೈನಿಕರು “ನಿರುದ್ಯೋಗಿಗಳಾಗುತ್ತಾರೆ, ಅವರ ಒಟ್ಟು ಸಂಖ್ಯೆ ಪ್ರತಿ ವರ್ಷವೂ ಹೆಚ್ಚುತ್ತಲೇ ಇರುವುದರಿಂದ, ಇದು ಯುವಕರಲ್ಲಿ ಹೆಚ್ಚಿನ ಅಸಮಾಧಾನಕ್ಕೆ ಕಾರಣವಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕಾರ್ಪೊರೇಟ್ ವಲಯವು 15 ರ ನಂತರ ನಿವೃತ್ತಿ ಹೊಂದುವ ನಿಯಮಿತ ಮಿಲಿಟರಿ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಹೆಚ್ಚಿನ ಆಸಕ್ತಿಯನ್ನು ತೋರಿಸದಿದ್ದಾಗ ಈ ನಿವೃತ್ತ ಸೈನಿಕರ ಭವಿಷ್ಯವೇನು ಎಂದು ಸಂಸದ ವರುಣ್ ಗಾಂಧಿ ಸರಕಾರವನ್ನು ಪ್ರಶ್ನಿಸಿದ್ದಾರೆ.

Join Whatsapp
Exit mobile version