ನವದೆಹಲಿ: ವಾಲ್ಮೀಕಿ ನಿಗಮ, ಮುಡಾ ಹಗರಣ ಹಿನ್ನೆಲೆಯಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ನವದೆಹಲಿಯಲ್ಲಿ ಬಿಜೆಪಿ ಸಂಸದರು ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರು ದೆಹಲಿಯ ಸಂಸತ್ ನ ಗಾಂಧಿ ಪ್ರತಿಮೆ ಎದುರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುವಲ್ಲಿ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.