ಬೆಂಗಳೂರು: ‘ಬಿಜೆಪಿ ಸರ್ಕಾರ ಜಾತಿಯ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದೆ. ಯಾವುದೇ ಜನಪರ ಕಾರ್ಯಗಳ ಕಡೆಗೆ ಗಮನ ಹರಿಸುತ್ತಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚುನಾವಣೆಯಲ್ಲಿ ಗೆದ್ದು, ರಾಜ್ಯವನ್ನು ಲೂಟಿ ಹೊಡೆಯುವುದೇ ಬಿಜೆಪಿ ಕೆಲಸವಾಗಿದೆ. ಅವರ ಪರ್ಸೆಂಟೇಜ್ ಪ್ರಮಾಣ ಶೇ50 ಆಗಬಹುದು’ ಎಂದು ಲೇವಡಿ ಮಾಡಿದರು.
‘ಪಿಎಸ್ಐ ನೇಮಕಾತಿಯಲ್ಲಿ ಆಗಿರುವ ಅವ್ಯವಹಾರದ ತನಿಖೆ ಪಾರದರ್ಶಕವಾಗಿ ಆಗಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಬೇಕು’ ಎಂದು ಒತ್ತಾಯಿಸಿದರು.