ಮುಂದಿನ ಚುನಾವಣೆಗೆ ಬಿಜೆಪಿ ಸಜ್ಜು: ಚಿತ್ರದುರ್ಗಕ್ಕೆ ಇಂದು ಜೆ.ಪಿ. ನಡ್ಡಾ ಭೇಟಿ

Prasthutha|

ಚಿತ್ರದುರ್ಗ: ಇಂದು ಕೋಟೆನಾಡು ಚಿತ್ರದುರ್ಗದಲ್ಲಿ ರಾಜ್ಯಮಟ್ಟದ ಜನಪ್ರತಿನಿಧಿಗಳ ಸಮಾವೇಶ ನಡೆಯಲಿದ್ದು, ಬಿಜೆಪಿ ರಾ‌ಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪಾಲ್ಗೊಳ್ಳಲಿದ್ದಾರೆ.

- Advertisement -

ಜಿಲ್ಲೆಯ ಮುರುಘಾಮಠದ ಅನುಭವ ಮಂಟಪ ಸಭಾಂಗಣದಲ್ಲಿ ಸಮಾವೇಶ ನಡೆಯಲಿದ್ದು, ಜೆ.ಪಿ. ನಡ್ಡಾ ಅವರು ಮಧ್ಯಾಹ್ನ ಸುಮಾರು 3:45ಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ. 4:10ಕ್ಕೆ ರಾಜ್ಯಮಟ್ಟದ ಜನಪ್ರತಿನಿಧಿಗಳ ಸಮಾವೇಶದಲ್ಲಿ ಭಾಗಿ ಆಗಲಿದ್ದು, 5:20ಕ್ಕೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

ಸಮಾವೇಶದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್, ಸಾರಿಗೆ ಸಚಿವ ಬಿ.ಶ್ರೀರಾಮುಲು, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಸ್ಥಳೀಯ ಬಿಜೆಪಿ ಶಾಸಕರು ಭಾಗಿ ಆಗಲಿದ್ದಾರೆ.

Join Whatsapp